ಕರಾವಳಿ

ಕಾಲೇಜಿನಲ್ಲಿ ರ‍್ಯಾಗಿಂಗ್ ನಡೆಸಿ ಬಂಧಿತರಾಗಿದ್ದ ಎಲ್ಲಾ ವಿದ್ಯಾರ್ಥಿಗಳಿಗೆ ಜಾಮೀನು ಮಂಜೂರ್

Pinterest LinkedIn Tumblr

ಮಂಗಳೂರು, ಫೆಬ್ರವರಿ.13: ನಗರ ಹೊರವಲಯದ ಖಾಸಗಿ ಕಾಲೇಜಿವೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ರ್‍ಯಾಗಿಂಗ್ ಮಾಡುತ್ತಿದ್ದ ಆರೋಪದಡಿ ಬಂಧಿಸಲಾಗಿದ್ದ ಎಲ್ಲಾ 11 ಮಂದಿ ವಿದ್ಯಾರ್ಥಿಗಳಿಗೆ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ನೀಡಿದೆ‌.

ನಗರ ಹೊರವಲಯದ ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ರ್‍ಯಾಗಿಂಗ್ ಮಾಡುತ್ತಿದ್ದ ಆರೋಪದಡಿ 11 ಮಂದಿ ವಿದ್ಯಾರ್ಥಿಗಳನ್ನು ಮಂಗಳೂರು ನಗರ ಪೊಲೀಸರು ಗುರುವಾರ ಬಂಧಿಸಿದ್ದರು.

ದೇರಳಕಟ್ಟೆಯ ಕಣಚೂರು ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಯನ್ಸ್ ಕಾಲೇಜಿನಲ್ಲಿ ಕಾಲೇಜಿನ ಫಿಸಿಯೋಥೆರಪಿ ಮತ್ತು ನರ್ಸಿಂಗ್ ಶಿಕ್ಷಣ ಪಡೆಯುತ್ತಿದ್ದ ಐವರು ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರ್‍ಯಾಗಿಂಗ್ ನಡೆಸಿದ್ದು, ಗಡ್ಡ- ಮೀಸೆ ಬೋಳಿಸಬೇಕು, ಪೊಟ್ಟಣದಲ್ಲಿರುವ ಬೆಂಕಿ ಕಡ್ಡಿಗಳನ್ನು ಎಣಿಸಬೇಕು ಎಂದು ಕಿರುಕುಳ ನೀಡಿದ್ದು, ದೈಹಿಕವಾಗಿ ಕೂಡ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾತ್ತು.

ಕಾಲೇಜಿನ ಎರಡನೇ ವರ್ಷದ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿರುವ 18 ವಿದ್ಯಾರ್ಥಿಗಳು ರ‍್ಯಾಗಿಂಗ್ ಮಾಡಿದ್ದಾರೆ ಎಂದು ಆರೋಪಿಸಿ ಕಾಲೇಜಿನ ಕ್ಯಾಂಪಸ್ ಆಫೀಸರ್ ಮಾರ್ಟಿನ್ ಜಾರ್ಜ್ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡ ಪೊಲೀಸರು ವಿದ್ಯಾರ್ಥಿಗಳಾದ ಕೇರಳದ ಕ್ಯಾಲಿಕಟ್‌ನ ಪಾಳಿಯಾಡ್ ನಿವಾಸಿ ಮುಹಮ್ಮದ್ ಶಮ್ಮಾಸ್ (19), ಕೊಟ್ಟಾಯಂ ವೈಕ್ಯಂ ನಿವಾಸಿ ಅಕ್ಷಯ್ ಕೆ.ಎಸ್. (19), ಕೊಟ್ಟಾಯಂ ಅಯರ್ ಕುನ್ನ ರೋಬಿನ್ ಬಿಜು (20), ಕಾಸರಗೋಡು ಉಳ್ಳೂರಿನ ಅಬ್ದುಲ್ ಅನಸ್ (21), ಚಿಟ್ಟಾರಿಕಲ್ ಜೆಫಿನ್ ರೋಯಿಚನ್ (19), ಕೊಟ್ಟಾಯಂನ ಅಲ್ವಿನ್ ಜೋಯ್ (19), ಜೆರೋನ್ ಸಿರಿಲ್ (19), ಪತ್ತನಂತಿಟ್ಟ ನಿವಾಸಿ ಸೂರಜ್ (19), ಚೆಮ್ಮತ್ತೂರು ಆಸಿನ್ ಬಾಬು (19), ಮಲಪುರಂ ಜುಬಿನ್ ಮೆಹರೂಫ್ (21) ಹಾಗೂ ಅಬ್ದುಲ್ ಬಾಸಿತ್ (19) ಎಂಬವರನ್ನು ಬಂಧಿಸಿದ್ದರು.

Comments are closed.