ಕರಾವಳಿ

ನಾಳೆ ಪ್ರೇಮಿಗಳ ದಿನ : ಅಹಿತಕರ ಘಟನೆಗಳು ನಡೆಯದಂತೆ ಮಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Pinterest LinkedIn Tumblr

ಮಂಗಳೂರು, ಫೆಬ್ರವರಿ.13: ನಗರದಲ್ಲಿ ನಾಳೆ ನಡೆಯಲಿರುವ ವ್ಯಾಲಂಟೈನ್ಸ್ ಡೇ ಆಚರಣೆಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗೆ ಆಸ್ಪದವಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಂಗಳೂರು ಡಿಸಿಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.

ವ್ಯಾಲಂಟೈನ್ಸ್ ಡೇ ಆಚರಣೆಗೆ ವಿರೋಧ ವ್ಯಕ್ತಪಡಿಸುವ ಕುರಿತಾದ ಪೋಸ್ಟ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತಿದ್ದು, ಪ್ರೇಮಿಗಳ ದಿನಾಚರಣೆಯ ದಿನದಂದು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದವರು ತಿಳಿಸಿದ್ದಾರೆ..

ಫೆ.14ರಂದು ಸೂಕ್ತ ಭದ್ರತಾ ಕ್ರಮಕೈಗೊಳ್ಳಲಾಗಿದೆ. ಪ್ರೇಮಿಗಳ ದಿನಾಚರಣೆ ಮಾಡಲು ಬಿಡುವುದಿಲ್ಲ ಎಂದು ಹೇಳಿಕೆ ನೀಡಿದ್ದದ ಓರ್ವನನ್ನು ಠಾಣೆಗೆ ಕರೆಸಿ ಮುಚ್ಚಳಿಕೆ ಬರೆಯಿಸಿ ಎಚ್ಚರಿಕೆ ನೀಡಿಲಾಗಿದೆ. ಇದೇ ರೀತಿ ಹಲವರನ್ನು ಠಾಣೆಗೆ ಕರೆಸಿ ಸಭೆ ನಡೆಸಿ ಎಚ್ಚರಿಕೆ ನೀಡಲಾಗಿದೆ.

ರಾಣಿ ಅಬ್ಬಕ್ಕ ಪಡೆಯು ನಿರಂತರ ಗಸ್ತಿನಲ್ಲಿರುತ್ತದೆ. ನಗರದ ಎಲ್ಲಾ ಕಡೆಗಳಲ್ಲಿ ಪೊಲೀಸರು ಕಣ್ಗಾವಲು ನಡೆಸುತ್ತಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಲ್ಲಾ ರೀತಿಯ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಡಿಸಿಪಿ ಹರಿರಾಂ ಶಂಕರ್ ಮಾಧ್ಯಮಕ್ಕೆ ತಿಳಿಸಿದ್ದಾರೆ.

Comments are closed.