ಕರಾವಳಿ

ಮೊಗವೀರ, ಬೆಸ್ತ, ಅಂಬಿಗ, ಬೋವಿ ಸೇರಿದಂತೆ 37 ಪರ್ಯಾಯ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಸಂಸದರಿಂದ ಮನವಿ

Pinterest LinkedIn Tumblr

ಮಂಗಳೂರು : ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಶ್ರೀ.ಅರ್ಜುನ್ ಮುಂಡಾ ಇವರನ್ನು ಭೇಟಿ ಮಾಡಿ ಬಂಟ್ವಾಳ ತಾಲ್ಲೂಕಿನಲ್ಲಿ ಉದ್ದೇಶಿತ ಹೊಸ ಏಕಲವ್ಯ ಮಾದರಿ ವಸತಿ ಶಾಲೆಯನ್ನು ಅಂದಾಜು 20 ಕೋಟಿ ರೂ. ಸ್ಥಾಪಿಸುವ ಕರ್ನಾಟಕ ಸರ್ಕಾರದ ಪ್ರಸ್ತಾವನೆಯನ್ನು ಅನುಮೋದಿಸುವಂತೆ ಕೋರಿದರು.

ಸಂಸದರ ಮನವಿಗೆ ಸಚಿವರು ಬಂಟ್ವಾಳದಲ್ಲಿ ಏಕಲವ್ಯ ಮಾದರಿ ವಸತಿ ಶಾಲೆಯನ್ನು ಪ್ರಾರಂಭಿಸುವ ಭರವಸೆ ನೀಡಿದರು.

ಅಲ್ಲದೇ ರಾಜ್ಯದಲ್ಲಿ ಸುಮಾರು 20 ಲಕ್ಷ ಜನಸಂಖ್ಯೆ ಹೊಂದಿರುವ ಗಂಗಾಮತ ಸಮುದಾಯವು ಗಂಗಾಮತ, ಮೊಗವೀರ, ಬೆಸ್ತ, ಅಂಬಿಗ, ಬೋವಿ ಸೇರಿದಂತೆ 37 ಪರ್ಯಾಯ ಪದಗಳನ್ನು ಹೊಂದಿರುವ ಈ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆಯೂ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಶ್ರೀ ಅರ್ಜುನ್ ಮುಂಡಾ ಇವರನ್ನು ಒತ್ತಾಯಿಸಿದರು.

ಸಂಸದರ ಮನವಿಗೆ ಸಚಿವರು ಸಕಾರಾತ್ಮಕ ವಾಗಿ ಸ್ಪಂದಿಸಿರುತ್ತಾರೆ ಎಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.

Comments are closed.