ಕರಾವಳಿ

ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ನಮಗೆ ಪಿಎಫ್‌ಐನ ಹಣ ಬೇಡ: ಸಂಸದೆ ಶೋಭಾ ಕರಂದ್ಲಾಜೆ

Pinterest LinkedIn Tumblr

ಉಡುಪಿ: ಅಯೋಧ್ಯೆ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಹಣ ನಮಗೆ ಬೇಡ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಿಎಫ್‌ಐ ರಾಷ್ಟ್ರ ವಿರೋಧಿ ಸಂಘಟನೆಯಾಗಿದ್ದು ಅವರು ನಮ್ಮ ಆರ್‌ಎಸ್‌ಎಸ್ ಸ್ವಯಂಸೇವಕರನ್ನು ಕೊಲ್ಲುತ್ತಿದ್ದಾರೆ. ರಾಮ ಮಂದಿರ ನಿರ್ಮಿಸಲು ಅವರ ಹಣ ನಮಗೆ ಬೇಡ. ರಾಮ ಮಂದಿರ ವಿರುದ್ದ ಪಿಎಫ್‌ಐ ನೀಡಿದ ಹೇಳಿಕೆ ರಾಷ್ಟ್ರ ವಿರೋಧಿಯಾಗಿದೆ ಎಂದರು.

ಪಿಎಫ್‌ಐ ನಿಷೇಧಿಸಲು ನಾನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳೊಂದಿಗೆ ಚರ್ಚೆ ನಡೆಸಿದ್ದೇನೆ. ಪಿಎಫ್‌ಐ ವಿರುದ್ಧ ದಾಖಲಾದ ಎಲ್ಲಾ ಪ್ರಕರಣಗಳ ಬಗ್ಗೆ ಗೃಹ ಸಚಿವಾಲಯ ತನಿಖೆ ನಡೆಸುತ್ತಿದೆ. ತನಿಖೆ ಪೂರ್ಣಗೊಂಡ ನಂತರ ಅದನ್ನು ನಿಷೇಧಿಸಲಾಗುವುದು ಎಂದು ತಿಳಿಸಿದರು.

ಕೇರಳದಲ್ಲಿ, ಪಿಎಫ್‌ಐ ರಾಜ್ಯ ಸರ್ಕಾರದ ಅನುಮತಿಯೊಂದಿಗೆ ಕೈಯಲ್ಲಿ ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು ಮೆರವಣಿಗೆಗಳನ್ನು ನಡೆಸುತ್ತಿದೆ. ಪಿಎಫ್‌ಐ ರಾಷ್ಟ್ರ ವಿರೋಧಿ ಸಂಘಟನೆ ಎಂದು ತಿಳಿದ ನಂತರವೂ ಕೇರಳ ಸರ್ಕಾರ ಕೇವಲ ಓಟ್ ಬ್ಯಾಂಕ್ ಗಳಿಸಲು ಮೆರವಣಿಗೆ ನಡೆಸಲು ಅನುಮತಿ ನೀಡುತ್ತಿದೆ ಎಂದು ಆರೋಪಿಸಿದರು. ಕೇರಳ ಸರ್ಕಾರದ ಕ್ರಮವನ್ನು ನಾವು ಖಂಡಿಸುತ್ತೇವೆ ಎಂದರು.

 

Comments are closed.