ಕರಾವಳಿ

ಯುವ ಸಮುದಾಯ ಮಾದಕ ವ್ಯಸನದಿಂದ ದೂರವಿದ್ದಲ್ಲಿ ಬದುಕು ಹಸನು : ಪೋಲೀಸ್ ಅಧಿಕಾರಿ ಶ್ರೀಲತಾ

Pinterest LinkedIn Tumblr

ಮಂಗಳೂರು : ಸಮಾಜದಲ್ಲಿ ಯುವಕ ಯುವತಿಯರು ಮಾದಕ ವ್ಯಸನದ ಕಡೆಗೆ ಆಸಕ್ತಿ ತೋರುತ್ತಿದ್ದಾರೆ ಇದರ ಬಗ್ಗೆ ಪೋಷಕರು ಹಾಗೂ ಶಿಕ್ಷಕರು ಗಮನಹರಿಸಬೇಕಾಗಿದೆ ಎಂದು ಪೋಲೀಸ್ ಅಧಿಕಾರಿ ಶ್ರೀಲತಾ ತಿಳಿಸಿದರು.

ಅವರು ಇತ್ತೀಚೆಗೆ ರಥಬೀದಿ ಮಂಗಳೂರು ಡಾ. ಪಿ.ದಯಾನಂದ ಪೈ-ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಮಾದಕ ವಸ್ತು ಅಪರಾಧ ಆರಕ್ಷಕ ಠಾಣೆ ಪಾಂಡೇಶ್ವರ ಇವರ ಸಹಯೋಗದೊಂದಿಗೆ ಮಾದಕ ವ್ಯಸನದ ದುಷ್ಪರಿಣಾಮ ಮತ್ತು ಕಾನೂನು ಸುರಕ್ಷತಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಯುವ ಸಮುದಾಯ ಬದುಕನ್ನು ದುವ್ರ್ಯಸನಗಳಿಂದ ದೂರವಿಟ್ಟು ಬದುಕು ಹಸನಾಗುವಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದ ಅವರು ಮಾದಕ ವ್ಯಸನದಿಂದಾಗುವ ದುಷ್ಪರಿಣಾಮ ಹಾಗೂ ಅದರ ಕಾನೂನಿನ ಬಗ್ಗೆ ಅರಿವು ಮೂಡಿಸಿದರು. ರಸ್ತೆ ಸುರಕ್ಷತೆ ಹಾಗೂ ಸೈಬರ್ ಅಪರಾಧದ ಬಗ್ಗೆ ಮಾಹಿತಿಯನ್ನು ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರಾಜಶೇಖರ ಹೆಬ್ಬಾರ್ ಸಿ. ಅಧ್ಯಕ್ಷತೆ ವಹಿಸಿ ಮಾತನಾಡಿ, ಮಾದಕ ವ್ಯಸನದಿಂದಾಗುವ ದುಷ್ಪರಿಣಾಮದಿಂದ ವಿದ್ಯಾರ್ಥಿಗಳ ಜೀವನದಲ್ಲಿ ಅನೇಕ ಅನಾಹುತಗಳು ಸಂಭವಿಸುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಗಳಾದ ಪ್ರೊ. ತ್ರಿಶಾಂತ್ ಕುಮಾರ್, ಡಾ. ಶೇಷಪ್ಪ ಅಮೀನ್, ಪ್ರೊ. ಅರುಣ ಕುಮಾರಿ ಮತ್ತು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಭಾಗವಹಿಸಿದರು.

Comments are closed.