ಕರಾವಳಿ

ಪತ್ರಕರ್ತರಿಗೆ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್‌ : ನೋಂದಣಿ ಶಿಬಿರಕ್ಕೆ ಚಾಲನೆ

Pinterest LinkedIn Tumblr

ಮಂಗಳೂರು,ಫೆಬ್ರವರಿ.22:ಆರೋಗ್ಯ ಸುರಕ್ಷತೆಯ ದ್ರಷ್ಟಿಯಿಂದ ಸರಕಾರದ ಪ್ರಮುಖ  ಯೋಜನೆ ಯಾದ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ಸೌಲಭ್ಯವನ್ನು ಸಮಾಜದ ಎಲ್ಲಾ ಜನರಿಗೆ ಒದಗಿಸಬೇಕು ಮತ್ತು ಈ ಮಾಹಿತಿ ಎಲ್ಲರಿಗೂ ತಲುಪಬೇಕಾಗಿದೆ ಎಂದು ದ.ಕ ರೆಡ್ ಕ್ರಾಸ್ ಚಯರ್ ಮನ್ ಡಾ.ಶಾಂತಾರಾಮ ಶೆಟ್ಟಿ ತಿಳಿಸಿದ್ದಾರೆ.

ಫೆ.22ರಿಂದ 24ರವರೆಗೆ ಪತ್ರಿಕಾಭವನದಲ್ಲಿ ಹಮ್ಮಿಕೊಂಡ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾ ಟಕ ಕಾರ್ಡ್ ‌ಗೆ ನೋಂದಣಿ ಶಿಬಿರವ ನ್ನು ಲೇಡಿಹಿಲ್ ನಲ್ಲಿರುವ ಪತ್ರಿಕಾಭ ವನ ದಲ್ಲಿಂದು ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ , ಜಿಲ್ಲಾ .ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು.

ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀ ನಿವಾಸ ಇಂದಾಜೆ ನಾಯಕ್,ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ವಾರ್ತಾ ಇಲಾಖೆಯ ದೀಪಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Comments are closed.