ಕರಾವಳಿ

ಯುವ ಸಬಲೀಕರಣ ಮತ್ತು ಕ್ರೀಡೆ ಸಚಿವ ಡಾ. ನಾರಾಯಣ ಗೌಡ ಅವರು ನಾಳೆ ಮಂಗಳೂರಿಗೆ…

Pinterest LinkedIn Tumblr

ಮಂಗಳೂರು, ಫೆಬ್ರವರಿ 25 : ಕರ್ನಾಟಕ ಸರ್ಕಾರದ ಮಾನ್ಯ ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ, ಕಾರ್ಯಕ್ರಮ, ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಾ. ನಾರಾಯಣ ಗೌಡ ಅವರು ಫೆಬ್ರವರಿ 26ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಫೆಬ್ರವರಿ 26 ರಂದು ಬೆಳಿಗ್ಗೆ 9 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ ಬೆಳಿಗ್ಗೆ 10.15ಕ್ಕೆ ಜಿಲ್ಲಾಧಿಕಾರಿ ಕಛೇರಿಯಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದ ಬಳಕೆ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಬೆಳಿಗ್ಗೆ 11.15ಕ್ಕೆ ದಿ ಓಷಿಯನ್ ಪರ್ಲ್ ಹೋಟೆಲ್‍ನಲ್ಲಿ ಆಯೋಜಿಸಲಾಗಿರುವ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1.30ಕ್ಕೆ ಮಂಗಳೂರಿ ನಿಂದ ಉಡುಪಿಗೆ ಪ್ರಯಾಣ ಬೆಳೆಸಲಿದ್ದಾರೆ.

Comments are closed.