ಕರಾವಳಿ

ತುಳು ಅಕಾಡೆಮಿಯ ಕಾರ್ಯ ಚಟುವಟಿಕೆಗಳು ಶ್ಲಾಘನೀಯ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

Pinterest LinkedIn Tumblr

ಮುಖ್ಯಮಂತ್ರಿ ಬಿ.ಎಸ್.ವೈಯವರಿಂದ ತುಳು ಅಕಾಡೆಮಿ ಪ್ರಶಸ್ತಿ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು/ ಬೆಂಗಳೂರು: ಬೆಂಗಳೂರಿನಲ್ಲಿ ಮಾರ್ಚ್ 7ರಂದು ನಡೆಯಲಿರುವ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ತುಳು ಅಕಾಡೆಮಿಯ ಕಾರ್ಯ ಚಟುವಟಿಕೆಗಳು ಉತ್ತಮವಾಗಿ ನಡೆಯುತ್ತಿದೆ, ಕೋವಿಡ್ ಸಂದರ್ಭದಲ್ಲಿಯೂ ಕಲಾವಿದರಿಗೆ ಆಸರೆಯಾಗುವ ಮೂಲಕ ಮಾದರಿ ಯಾಗಿದ್ದಿರಿ, ಬೆಂಗಳೂರಿನ ನಗರದಲ್ಲಿ ತುಳು ಭಾಷಾ ಪ್ರಶಸ್ತಿ ಸಮಾರಂಭ ಆಯೋಜಿಸಿರುವುದು ಶ್ಲಾಘನೀಯ ಎಂದು ತಿಳಿಸಿ, ಪ್ರಶಸ್ತಿ ಸಮಾರಂಭದಲ್ಲಿ ಭಾಗವಹಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ರಾಜ್ಯ ಮೀನುಗಾರಿಕಾ ಹಾಗೂ ಬಂದರುಗಳ ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಎಸ್. ಅಂಗಾರ ಅವರು ಶುಭ ಹಾರೈಸಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್‌ಸಾರ್ ಅವರು ಅಕಾಡೆಮಿಯ ಚಟುವಟಿಕೆಯ ಹಾಗೂ ಯೋಜನೆಗಳಿಗೆ ವಿಶೇಷ ಅನುದಾನದ ಬಗ್ಗೆ ಪ್ರಸ್ತಾಪಿಸಿ, ಕಳೆದ ಮೂರು ವರ್ಷದ ಅವಧಿಯ ಪ್ರಶಸ್ತಿ ಪುರಸ್ಕೃತ ಸಮಾರಂಭವನ್ನು ರಾಜಧಾನಿಯಲ್ಲಿ ನಡೆಸುವ ಉದ್ದೇಶವನ್ನು ವಿವರವಾಗಿ ತಿಳಿಸಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಸಮಾರಂಭದ ಸದಸ್ಯ ಸಂಚಾಲಕಿ ಕಾಂತಿ ಶೆಟ್ಟಿ ಬೆಂಗಳೂರು ಉಪಸ್ಥಿತರಿದ್ದರು.

 

Comments are closed.