ಕರಾವಳಿ

ಮನವಳಿಕೆ ಗುತ್ತು ಚಾವಡಿಗೆ ಬಂಟ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಭೇಟಿ

Pinterest LinkedIn Tumblr

ಮಂಗಳೂರು : ಪುತ್ತೂರು ತಾಲೂಕು ಪೆರಾಬೆ ಗ್ರಾಮದ ಮನವಳಿಕೆ ಗುತ್ತಿನ ಧರ್ಮದೈವ ಧೂಮಾವತಿ ಮತ್ತು ಪರಿವಾರ ದೈವಗಳ ಚಾವಡಿ ಹಾಗೂ ಬ್ರಹ್ಮ ಬೈದರ್ಕಳ ಗರಡಿಗೆ ಜಾಗತಿಕ ಬಂಟ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಇತ್ತೀಚೆಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ, ಮಹೇಶ್ ಮೋಟಾರ್‍ಸ್ ಮಾಲಕ ಎ.ಕೆ. ಜಯರಾಮ ಶೇಖ, ಬಿ.ಕೆ. ರವೀಂದ್ರ ರೈ, ಇಂಟರ್‌ನ್ಯಾಷನಲ್ ಬಂಟ್ಸ್ ವೆಲ್‌ಫೇರ್ ಟ್ರಸ್ಟ್‌ನ ‘ಸದಾಶಯ’ ಮಾಸ ಪತ್ರಿಕೆ ಸಂಪಾದಕ ಪ್ರೋ. ಭಾಸ್ಕರ್ ರೈ ಕುಕ್ಕುವಳ್ಳಿ, ಮನವಳಿಕೆ ಗುತ್ತಿನ ಯಜಮಾನ ರಮಾನಾಥ ರೈ, ವಿಠಲ ರೈ ಮನವಳಿಕೆ, ಗೋಪಾಲಕೃಷ್ಣ ರೈ, ಎಂ. ದಯಾನಂದ ರೈ, ಹೇಮಂತ್ ರೈ ಮನವಳಿಕೆ ಗುತ್ತು, ಎಂ. ರಾಧಾಕೃಷ್ಣ ರೈ, ಎಂ. ರಾಧಾಕೃಷ್ಣ ರೈ – ದೆಹಲಿ, ಮನವಳಿಕೆ ಗುತು ಲಕ್ಷ್ಮೀನಾರಾಯಣ ರೈ ಹರೇಕಳ ಉಪಸ್ಥಿತರಿದ್ದರು.

Comments are closed.