ಉಡುಪಿ: ಕುಂದಾಪುರ ಕಡೆಯಿಂದ ಉಡುಪಿಯತ್ತ ಸಾಗುತ್ತಿದ್ದ ಕಾರೊಂದು ಬೈಕಿಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ಸಾಸ್ತಾನ ಗುಂಡ್ಮಿ ಟೋಲ್ ಪ್ಲಾಜಾದ ಸಮೀಪ ಭಾನುವಾರ ಸಂಭವಿಸಿದೆ.
ಮೃತ ಯುವಕನನ್ನು ಕೋಟ ಸಮೀಪದ ಬನ್ನಾಡಿ ನಿವಾಸಿ ಸುಭಾಷ್ ಎಂದು ಗುರುತಿಸಲಾಗಿದೆ.
ಕುಂದಾಪುರ ಚರ್ಚ್ ಧರ್ಮಗುರುಗಳಾದ ವಂ|ಸ್ಟ್ಯಾನಿ ತಾವ್ರೊ ಅವರು ಚಲಾಯಿಸುತ್ತಿದ್ದರೆನ್ನಾಲಾದ ಕಾರು ಇದಾಗಿದ್ದು ಅವರು ಕಾರ್ಯನಿಮಿತ್ತ ಉಡುಪಿಗೆ ತೆರಳುತ್ತಿದ್ದರು. ಈ ವೇಳೆ ಟೋಲ್ ಫ್ಲಾಜಾ ಹಿಂಬಂದಿ ಗುಂಡ್ಮಿ ಜಂಕ್ಷನ್ ಬಳಿ ಬೈಕಿಗೆ ಕಾರು ಡಿಕ್ಕಿಹೊಡೆದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರ ಸುಭಾಷ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಕೋಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.