ಬೆಂಗಳೂರು: ರಾಸಲೀಲೆ ಸಿಡಿಬಿಡುಗಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಕೊನೆಗೂ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಯುವತಿಯೊಬ್ಬಳ ಜೊತೆ ರಾಸಲೀಲೆಯಲ್ಲಿ ತೊಡಗಿದ್ದ ಸಿಡಿ ಬಯಲಿಗೆ ಬಂದ ಬೆನ್ನಲ್ಲೇ ಅಜ್ಞಾತ ಸ್ಥಳಕ್ಕೆ ಹೋಗಿದ್ದ ರಮೇಶ್ ಜಾರಕಿಹೊಳಿ ಕೊನೆಗೂ ರಾಜಿನಾಮೆ ನೀಡಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ರಮೇಶ್ ಜಾರಕಿಹೊಳಿ ರಾಜಿನಾಮೆ ಪತ್ರ ರವಾನಿಸಿದ್ದು, ಈ ಘಟನೆಯಿಂದ ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಒಂದೇ ಒಂದು ಕಾರಣದಿಂದಾಗಿ ನನ್ನ ಸ್ಥಾನಕ್ಕೆ ರಾಜಿನಾಮೆ ಸಲ್ಲಿಕೆ ಮಾಡಿದ್ದೇನೆ ಎಂದು ಪತ್ರದಲ್ಲಿ ರಮೇಶ್ ಜಾರಕಿಹೊಳಿ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.
ಅಂತೆಯೇ ಈ ಪ್ರಕರಣದ ಕುರಿತು ಕೂಲಂಕುಷ ತನಿಖೆಯಾಗಬೇಕು. ಬಳಿಕ ನಾನು ನಿರ್ದೋಷಿ ಎಂದು ಬಹಿರಂಗವಾದ ಬಳಿಕ ಮತ್ತೆ ನನ್ನ ಸ್ಥಾನ ಪಡೆಯುತ್ತೇನೆ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.
ಇನ್ನು ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಬಯಲು ವಿಚಾರಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ವಿರುದ್ಧ ತೀವ್ರ ಟೀಕಾ ಪ್ರಹಾರ ನಡೆಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಾನ ಮರ್ಯಾದೆ ಇದ್ದರೆ ರಾಜಿನಾಮೆ ನೀಡಿ ಎಂದು ಹೇಳಿದ್ದರು.
ರಾಸಲೀಲೆ ಸಿಡಿ ಬಹಿರಂಗ: ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ ಸಾಹುಕಾರ್ ರಮೇಶ್ ಜಾರಕಿಹೊಳಿ