ಕರಾವಳಿ

ನಾಳೆ ಮಂಗಳೂರಿಗೆ ಭೇಟಿ ನೀಡಲಿದ್ದಾರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್

Pinterest LinkedIn Tumblr

ಮಂಗಳೂರು, ಮಾರ್ಚ್ 05 : ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ. ಸುಧಾಕರ್ ಅವರು ಮಾರ್ಚ್ 6 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಮಾರ್ಚ್ 6 ರಂದು ಮಧ್ಯಾಹ್ನ 1.20ಕ್ಕೆ ಮಂಗಳೂರಿಗೆ ಆಗಮಿಸಿ, ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ನಂತರ ಸಂಜೆ 5.30ಕ್ಕೆ ದಿ. ರತ್ನ ಮಾಧವ ಶೆಟ್ಟಿ ವೇದಿಕೆಯಲ್ಲಿ ಮಂಗಳೂರು ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 8 ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

Comments are closed.