ಕರಾವಳಿ

ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸು ಚಾಲಕನ ಕೊಲೆಗೆ ಯತ್ನ : ಆರೋಪಿ ಸೋಹಿಫ್ ಬಂಧನ

Pinterest LinkedIn Tumblr

ಮಂಗಳೂರು, ಮಾರ್ಚ್. 06 : ಪುತ್ತೂರು ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್‌ನ ಸುಗಮ ರಸ್ತೆ ಸಂಚಾರಕ್ಕೆ ತಡೆಯೊಡ್ಡಿದ ಯುವಕನೋರ್ವ ಬಸ್ಸು ಚಾಲಕನ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆಗೈಯಲು ಪ್ರಯತ್ನಿಸಿರುವ ಘಟನೆ ನಿನ್ನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪುತ್ತೂರು ಡಿಪೋದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ರಾಜು ಗಜಕೋಶ ಇಂದು ಪುತ್ತೂರಿನಿಂದ ಮಂಗಳೂರು ಕಡೆ ಪ್ರಯಾಣ ಮಾಡುತ್ತಿರುವ ರಸ್ತೆಯಲ್ಲಿ ಡಿಯೋ ಸ್ಕೂಟರ್ ಸವಾರ ಬೇಕಾಬಿಟ್ಟಿಯಾಗಿ ವಾಹನ ಚಲಾಯಿಸಿದ್ದು, ಇದನ್ನು ಪ್ರಶ್ನೆ ಮಾಡಿದ ಬಸ್ ಚಾಲಕನ ಮೇಲೆ ಬೈಕ್ ಸವಾರ ಸೋಹಿಫ್ ಮಾರಕಾಸ್ತ್ರದಿಂದ ಹಲ್ಲೆಗೆ ಯತ್ನಿಸಿದ್ದಾನೆ.

ಮಾತ್ರವಲ್ಲದೆ ಸ್ಕೂಟರ್ ನಿಂದ ಇಳಿದು ಬಂದ ಸೋಹಿಫ್ ಬಸ್ ಚಾಲಕ ರಾಜು ಗಜಕೋಶರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಪ್ರಯತ್ನ ನಡೆಸಿದ್ದಾನೆ ಎಂದು ಆರೋಪಿಸಲಾಗಿತ್ತು.

ಈ ಬಗ್ಗೆ ಪುತ್ತೂರು ಡಿಪೋದ ಕೆಎಸ್ ಆರ್ ಟಿಸಿ ಬಸ್ ಚಾಲಕ ರಾಜು ಗಜಕೋಶ ಅವರು ಪೊಲೀಸರಿಗೆ ದೂರು ನೀಡಿದ್ದು, ಆರೋಪಿ ಸೋಹಿಫ್ (19) ನನ್ನು ಪೊಲೀಶರು ವಶಕ್ಕೆ ಪಡೆದಿದ್ದಾರೆ. ಆರೋಪಿ ವಿರುದ್ಧ ಕಂಕನಾಡಿ ನಗರ ಠಾಣೆಯಲ್ಲಿ ಕಲಂ 341, 504, 506, 353, 307ರ ಅಡಿ ಪ್ರಕರಣ ದಾಖಲಾಗಿದೆ.

Comments are closed.