ಕರಾವಳಿ

ತೆಕ್ಕಟ್ಟೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದೊಳಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

Pinterest LinkedIn Tumblr

ಉಡುಪಿ: ಜಿಲ್ಲೆಯ ಕೋಟ ಪೊಲೀಸ್ ಠಾಣೆ ವ್ಯಾಪ್ತಿಯ ತೆಕ್ಕಟ್ಟೆ ಶ್ರೀ ಮಹಾಲಿಂಗೇಶ್ವರ ದೇವಾಸ್ಥಾನದ ಒಳಗೆ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಮುಂಜಾನೆ ಬೆಳಕಿಗೆ ಬಂದಿದೆ.

ತೆಕ್ಕಟ್ಟೆ ಬಾರಾಳಿಬೆಟ್ಟು ನಿವಾಸಿ ಚಂದ್ರ ಪೂಜಾರಿ (35) ಆತ್ಮಹತ್ಯೆಗೆ ಶರಣಾದ ಯುವಕ. ಈತ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದ. ದೇವಸ್ಥಾನದ ಬಾವಿಯ ಹಗ್ಗವನ್ನು ಉಪಯೋಗಿಸಿ ಚಂದ್ರ ಪೂಜಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತ ಚಂದ್ರ ಪೂಜಾರಿ ಎರಡು ವರ್ಷಗಳ ಹಿಂದಷ್ಟೇ ವಿವಾಹವಾಗಿದ್ದರು. ಪ್ರತಿ ದಿನ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಲ್ದೆ ದೇವಸ್ಥಾನದ ಕೆಲಸ ಕಾರ್ಯಗಳಿಗೆ ನೆರವಾಗುತ್ತಿದ್ದರು. ಮಾಹಿತಿಗಳ ಪ್ರಕಾರ ಚಂದ್ರ ಅವರು ಇತ್ತೀಚೆಗೆ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಕೋಟ ಪೊಲೀಸರು ಸ್ಥಳಕ್ಕೆ ಭೇಟಿ‌ನೀಡಿ ಪರಿಶೀಲ‌ನೆ ನಡೆಸಿದ್ದು ಕೋಟ ಠಾಣೆಯಲ್ಲಿ‌ ಈ ಬಗ್ಗೆ ಪ್ರಕರಣ ದಾಖಲಾಗಿದೆ.

 

 

Comments are closed.