ಕರಾವಳಿ

ವೆನ್ಲಾಕ್ ಆಸ್ಪತ್ರೆ ಬಳಿಯ ಕ್ಯಾಂಟಿನ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಶಾಕ್ : ಯುವಕ ಮೃತ್ಯು

Pinterest LinkedIn Tumblr

ಮಂಗಳೂರು: ಮಂಗಳೂರಿನ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಸಮೀಪದ ಕಾಫಿ ಶಾಪ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕ ವಿದ್ಯುತ್ ಶಾಕ್ ನಿಂದ ಮೃತಪಟ್ಟ ಘಟನೆ ನಡೆದಿದೆ.

ಮೃತ ಯುವಕನು ಕೋಟೆಕಾರ್ ಬೀರಿ ನಿವಾಸಿ ಅನೀಶ್ (20) ಎಂದು ಗುರುತಿಸಲಾಗಿದೆ. ಮೃತ ಯುವಕನು ಕೆಪಿಟಿ ಕಾಲೇಜಿನಲ್ಲಿ ಓದುತ್ತಾ ವೆನ್ಲಾಕ್ ಆಸ್ಪತ್ರೆ ಸಮೀಪದ ಕ್ಯಾಂಟಿನ್ ನಲ್ಲಿ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ.

ಯುವಕ ಕ್ಯಾಂಟೀನ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ಶಾರ್ಕ್ ಸರ್ಕ್ಯೂಟ್ ಸಂಭವಿಸಿ ಮೃತಪಟ್ಟಿರುವುದು ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಈ ಬಗ್ಗೆ ಮಂಗಳೂರು ದಕ್ಷಿಣ (ಪಾಂಡೇಶ್ವರ) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.