ಕರಾವಳಿ

ಮಾಡೆಲ್‌ ಪ್ರೇಕ್ಷಾ ನಿಗೂಢ ಸಾವು ಪ್ರಕರಣ: ಸ್ನೇಹಿತ ಯತೀನ್‌ ರಾಜ್‌ಗೆ 14 ದಿನಗಳ ನ್ಯಾಯಾಂಗ ಬಂಧನ

Pinterest LinkedIn Tumblr

ಮಂಗಳೂರು, ಮಾ.15 : ಉಳ್ಳಾಲ ಠಾಣಾ ವ್ಯಾಪ್ತಿಯ ಕುಂಪಲ ಆಶ್ರಯಕಾಲನಿ ನಿವಾಸಿ ವಿದ್ಯಾರ್ಥಿನಿ ಹಾಗೂ ಹವ್ಯಾಸಿ ಮಾಡೆಲ್‌ ಪ್ರೇಕ್ಷಾ (17) ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿದ್ದ ಆಕೆಯ ಸ್ನೇಹಿತ, ಆರೋಪಿ ಯತೀನ್‌ ರಾಜ್‌ಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಮಾರ್ಚ್ 10 ರಂದು ಪ್ರೇಕ್ಷಾಳ ಮೃತ ದೇಹವು ಆಕೆಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪೊಲೀಸರ ಪ್ರಾಥಮಿಕ ತನಿಖೆ ವೇಳೆ ಆಕೆಯ ಸ್ನೇಹಿತ ಯತೀನ್‌ ರಾಜ್‌ಗೆ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು.

ಘಟನೆ ನಡೆದ ದಿನ ಆಕೆಯ ಮನೆಗೆ ಭೇಟಿ ನೀಡಿದ್ದ ಸ್ನೇಹಿತ ಯತೀನ್‌ ರಾಜ್‌ ಸೇರಿದಂತೆ ಮೂವರು ಯುವಕರನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದರು.. ಆತನ ವಿಚಾರಣೆಯ ವೇಳೆ ಪೊಲೀಸರು ಸಂಗ್ರಹಿಸಿದ ಸಾಕ್ಷ್ಯಗಳ ಆಧಾರದ ಮೇಲೆ ಇಬ್ಬರನ್ನು ಮನೆಗೆ ಕಳುಹಿಸಲಾಗಿದೆ. ಆ ಪೈಕಿ ಪ್ರೇಕ್ಷಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಯತೀನ್‌ ರಾಜ್‌ನನ್ನು ಬಂಧನದಲ್ಲಿರಿಸಲಾಗಿತ್ತು.

ಹವ್ಯಾಸಿ ಮಾಡೆಲ್‌ ಆಗಿದ್ದ ಪ್ರೇಕ್ಷಾಳಿಗೆ ಫೋಟೋ ಶೂಟ್‌ಗೆ ಬೆಂಗಳೂರಿಗೆ ತೆರಳದಂತೆ ಯತೀನ್‌ ರಾಜ್‌ ಒತ್ತಡ ಹೇರಿದ ಹಿನ್ನೆಲೆಯಲ್ಲಿ ಆಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಯತೀನ್‌ ರಾಜ್‌ ನನ್ನು ಬಂಧಿಸಿದ್ದ ಪೊಲೀಸರು ಅತನನ್ನು ನ್ಯಾಯಾಲಯಕ್ಕೆ ಹಾಜಾರು ಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಕುಂಪಲ ಆಶ್ರಯಕಾಲನಿ ನಿವಾಸಿ ವಿದ್ಯಾರ್ಥಿನಿ ಹಾಗೂ ಹವ್ಯಾಸಿ ಮಾಡೆಲ್‌ ಪ್ರೇಕ್ಷಾ (17) ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೇಕ್ಷಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಯತೀನ್‌ ರಾಜ್‌ನನ್ನು ಬಂಧಿಸಲಾಗಿದೆ.

Comments are closed.