ಕರಾವಳಿ

ದ.ಕ.ಜಿಲ್ಲೆಯಲ್ಲಿ ಮತ್ತೆ ಕೊರೋನಾ ಆತಂಕ: ಬುಧವಾರ 72 ಮಂದಿಯಲ್ಲಿ ಸೋಂಕು ಪತ್ತೆ

Pinterest LinkedIn Tumblr

ಮಂಗಳೂರು, ಮಾರ್ಚ್17: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಸಂಖ್ಯೆ ಮತ್ತೊಮ್ಮೆ ದಿನೇ ದಿನೇ ಹೆಚ್ಚುತ್ತಿದ್ದು, ದ.ಕ. ಜಿಲ್ಲೆಯಲ್ಲಿ ಬುಧವಾರ 72 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ದ.ಕ.ಜಿಲ್ಲೆಯಲ್ಲಿ ಇಲ್ಲಿಯವರೆಗೆ 34,935 ಮಂದಿಗೆ ಕೊರೊನಾ ದೃಢಪಟ್ಟಿದೆ. ಜಿಲ್ಲೆಯಲ್ಲಿ ಇಂದು ಕೊರೋನಾಗೆ ಯಾರೂ ಬಲಿಯಾಗಿಲ್ಲ.ಆದರೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 741 ದಾಟಿದೆ. ಈ ನಡುವೆ ಬುಧವಾರ 25 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಗೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಂದಲೇ ಪಾಸಿಟಿವ್ ಸಂಖ್ಯೆ ಹೆಚ್ಚುತ್ತಿದ್ದು, ಇದು ಜಿಲ್ಲೆಯ ಜನರಲ್ಲಿ ಆತಂಕ ಉಂಟು ಮಾಡಿದೆ.

ಇಂದಿನ ಪ್ರಮುಖ ಅಂಶಗಳು :

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚುತ್ತಿದೆ ಕೊರೋನಾ ಪಾಸಿಟಿವ್

ಇಂದು ಜಿಲ್ಲೆಯಲ್ಲಿ ಬರೋಬ್ಬರಿ 72 ಮಂದಿಗೆ ಕೊರೋನಾ ಪಾಸಿಟಿವ್

ಕೇರಳದಿಂದ ಬಂದ ವಿದ್ಯಾರ್ಥಿಗಳಿಂದಲೇ ಹೆಚ್ಚುತ್ತಿರುವ ಪಾಸಿಟಿವ್

ಜಿಲ್ಲೆಯಲ್ಲಿ ಇಂದು ಕೊರೋನಾಗೆ ಯಾರೂ ಬಲಿಯಾಗಿಲ್ಲ.

ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 741

ಜಿಲ್ಲೆಯಲ್ಲಿ ಇಂದು ಕೇವಲ 25 ಮಂದಿ ಕೊರೋನಾದಿಂದ ಗುಣಮುಖ

ದ.ಕ.ಜಿಲ್ಲೆಯಲ್ಲಿ ಈವರೆಗೆ ಒಟ್ಟು 34,935 ಪಾಸಿಟಿವ್ ಕೇಸ್

ಜಿಲ್ಲೆಯಲ್ಲಿ ಒಟ್ಟು 378 ಆಕ್ವೀವ್ ಕೇಸ್.

Comments are closed.