ಮಂಗಳೂರು : ಆಯುಷ್ ಇಲಾಖೆ ದ.ಕ ಜಿಲ್ಲಾ ಪಂಚಾಯತ್, ಆಳ್ವಾಸ್ ಆಯುರ್ವೇದ, ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯ ಮೂಡುಬಿದಿರೆ ಇವರ ಸಹಯೋಗದಲ್ಲಿ ಸರಕಾರಿ ಆಯುಷ್ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕೊಲ್ಲೂರು ಬಳ್ಕುಂಜೆ ಇಲ್ಲಿ ನಡೆಯಲಿರುವ ವಿವಿದ ಆಯುಷ್ ಸೇವೆಗಳ ಆರಂಭ ಕಾರ್ಯಕ್ರಮವನ್ನು ಶಾಸಕ ಉಮನಾಥ್ ಕೋಟ್ಯಾನ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಇಂದಿನ ದಿನಗಳಲ್ಲಿ ಆಯುರ್ವೇದ ವಿಶ್ವ ಪ್ರಸಿದ್ಧಿ ಪಡೆಯುತ್ತಿದೆ. ಯೋಗ ಜೀವನದ ಅಂಗವಾದಲ್ಲಿ ಸದೃಡ ಆರೋಗ್ಯ ನಮ್ಮದಾಗಲಿದೆ. ಆಯುಷ್ ಇಲಾಖೆ ಮೂಲಕ ಜನರಿಗೆ ಉತ್ತಮ ವ್ಯವಸ್ಥೆ ಲಭಿಸುತ್ತಿದೆ ಎಂದು ಹೇಳಿದರು.
ವೈದ್ಯಾಧಿಕಾರಿ ಡಾ. ಶೋಭಾರಾಣಿ ಸ್ವಾಗತಿಸಿ ಪ್ರಸ್ತಾವನೆಗೈದರು. ಜಿಲ್ಲಾ ಪಂಚಾಯತ್ ಸದಸ್ಯ ವಿನೋದ್ ಬೇಲೂರು, ತಾಲೂಕು ಪಂಚಾಯತ್ ಸದಸ್ಯೆ ಶ್ರೀಮತಿ ರಶ್ಮಿ ಆಚಾರ್ಯ, ಬಳ್ಕುಂಜೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಮಮತಾ ಪುಂಜ, ಉಪಾಧ್ಯಕ್ಷರಾದ ,ಆನಂದ ಕೊಲ್ಲೂರು, ಸದಸ್ಯೆ ಶ್ರೀಮತಿ ಸುಜಾತ ಕೊಲ್ಲೂರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ಶ್ರೀಯುತ ವಿವೇಕ್ ಅಳ್ವಾ, ಆಳ್ವಾಸ್ ಆಯುರ್ವೇದ ಕಾಲೇಜಿನ ಪ್ರಾಂಶುಪಾಲರಾದ ಡಾ.ಸುಜಿತ್, ಆಳ್ವಾಸ್ ನ್ಯಾಚುರೋಪಥಿ ಮತ್ತು ಯೋಗ ಕಾಲೇಜಿನ ಪ್ರಾಂಶುಪಾಲರಾದ ಡಾ: ವನಿತಾ ಶೆಟ್ಟಿ. ಆಳ್ವಾಸ್ ಹೋಮಿಯೋಪತಿ ಕಾಲೇಜಿನ ಪ್ರಾಂಶುಪಾಲರಾದ ಡಾ. ರೋಷನ್ ಪಿಂಟೋ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ನೂತನವಾಗಿ ಆಯ್ಕೆಯಾದ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರನ್ನು ಸನ್ಮಾನಿಸಲಾಯಿತು. ಕೊಲ್ಲೂರಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಿದರು. ಯೋಗ ತರಬೇತಿದಾರ ಪ್ರನಿಕ್ ವಂದಿಸಿದರು.