ಕರಾವಳಿ

ಮಸೀದಿಗಳಲ್ಲಿ ಕೊವೀಡ್-19 ಲಸಿಕೆ ಪಡೆಯುವ ಬಗ್ಗೆ ಜನಜಾಗೃತಿ ಕಾರ್ಯಕ್ರಮ

Pinterest LinkedIn Tumblr

(ಸಾಂದರ್ಭಿಕ ಚಿತ್ರ)

ಮಂಗಳೂರು : ಕೊರೊನಾ ಸಾಂಕ್ರಾಮಿಕ ರೋಗವು ನಾಗರಿಕ ಸಮಾಜವನ್ನು ತಲ್ಲಣಗೊಳಿಸಿದ್ದು, ಇದರ ನಿಯಂತ್ರಣಕ್ಕಾಗಿ ಸರ್ಕಾರವು ನೀಡಿರುವ ಮುಂಜಾಗೃತ ಕ್ರಮಗಳನ್ನು ಅನುಸರಿಸುವುದರೊಂದಿಗೆ, ಜಿಲ್ಲೆಯ ಎಲ್ಲಾ ಮಸೀದಿಗಳಲ್ಲಿ ಕೊವೀಡ್-19 ಲಸಿಕೆ ಪಡೆಯುವ ಬಗ್ಗೆ ಜನಜಾಗೃತಿಯನ್ನು ಮೂಡಿಸಲಾಗುವುದು.

ಸರ್ಕಾರದ ಮಾರ್ಗಸೂಚಿಯ ಪ್ರಕಾರ 3ನೇ ಹಂತದ ಲಸಿಕಾಕರಣದಲ್ಲಿ 45 ರಿಂದ 59 ವಯಸ್ಸಿನ ಕೋಮೊರ್‍ಬಿಡ್ ಕಂಡಿಷನ್ (Comorbid condition) ಹೊಂದಿರುವ ಜನರಿಗೆ ಹಾಗೂ 60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರಿಗೆ ಈಗಾಗಲೇ ಕೋವಿಡ್ ಲಸಿಕೆಯನ್ನು ನೀಡುವ ಕಾರ್ಯಕ್ರಮ ಅನುಷ್ಠಾನಗೊಂಡಿದೆ.

ಕೋವಿಡ್ ಲಸಿಕೆಯ ಬಗ್ಗೆ ಜನಸಾಮಾನ್ಯರಲ್ಲಿ ಇರುವ ಭಯ, ತಪ್ಪು ಕಲ್ಪನೆಯನ್ನು ಹೋಗಲಾಡಿಸಿ, ಫಲಾನುಭವಿಗಳು ಲಸಿಕೆಯನ್ನು ಪಡೆಯುವಂತೆ ಜಿಲ್ಲಾ ಆರೋಗ್ಯ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.

ಆ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಮಸೀದಿಗಳಲ್ಲಿ ಜುಮ್ಮಾ ನಮಾಝಿನ ನಂತರ ಕೊವೀಡ್-19 ಲಸಿಕೆ ಪಡೆಯುವ ಬಗ್ಗೆ ಪ್ರಚುರ ಪಡಿಸಬೇಕಾಗಿ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಹಾಜಿಯು ಕೆ. ಮೋನು ಕನಚೂರು ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Comments are closed.