ಕರ್ನಾಟಕ

ಸಿ.ಟಿ. ರವಿ, ನಟ ಶಿವರಾಜಕುಮಾರ್ ಸಹಿತ ನನ್ನ ಹತ್ಯೆ ಮಾಡುವ ಬೆದರಿಕೆ: ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್

Pinterest LinkedIn Tumblr

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಹಾಗೂ ನನ್ನನ್ನೂ ಸೇರಿದಂತೆ ಪ್ರಮುಖರನ್ನು ಹತ್ಯೆ ಮಾಡುವ ಬೆದರಿಕೆ ಪತ್ರ ಬಂದಿದೆ ಎಂದು ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಹೇಳಿದ್ದಾರೆ.

ಭಾನುವಾರದಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಎಚ್‌.ಎಂ. ರೇವಣ್ಣ ಅಭಿನಂದನಾ ಸಮಾರಂಭ ಪಾಲ್ಗೊಂಡಾಗ ಈ ವಿಚಾರವನ್ನು ಬಿ.ಟಿ ಲಲಿತಾ ನಾಯಕ್ ಬಹಿರಂಗ ಪಡಿಸಿದ್ದಾರೆ.

ಮೇ. 1 ರಂದು ನನ್ನನ್ನು ಕೊಲೆ ಮಾಡುತ್ತಾರಂತೆ. ಈ ಕುರಿತ ಪತ್ರ ನನಗೆ ಬಂದಿದೆ. ಬಿಜೆಪಿ ಶಾಸಕ ಸಿ.ಟಿ. ರವಿ, ಸಂಪಾದಕ ರಂಗನಾಥ್(ಪಬ್ಲಿಕ್ ಟಿವಿ), ನಟ ಶಿವರಾಜ್ ಕುಮಾರ್ ಅವರನ್ನು ಕೊಲೆ ಮಾಡುತ್ತಾರಂತೆ. ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದೇನೆ. ಪೊಲೀಸರು ಅದನ್ನು ಪರಿಶೀಲನೆ ಮಾಡುತ್ತಿದ್ದಾರೆ ಎಂದು ಹೇಳಿದರು.

ಈ ಬೆದರಿಕೆಗಳಿಗೆ ನಾನು ಹೆದರುವಳು ಅಲ್ಲ. ಸಿ.ಟಿ. ರವಿಯನ್ನು ಕೊಲೆ ಮಾಡಿದರೆ ನಾನು ಉಳಿಯುತ್ತೇನೆ. ನನ್ನ ಕೊಲೆ ಮಾಡಿದರೆ ಸಿಟಿ ರವಿ ಉಳಿಯುತ್ತಾರೆ. ಇಂತಹ ಸಂದಿಗ್ಧ ಪರಿಸ್ಥಿತಿ ಎದುರಾಗಿದೆ. ಕೊಲೆ ಮಾಡುವರು ಎಲ್ಲಿದ್ದರೂ ಕೊಲೆ ಮಾಡುತ್ತಾರೆ. ಹಾಗಾಗಿ ನಾನು ಹೆದರಿಕೆಯಿಲ್ಲದೇ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದೇನೆ ಎಂದರು.

Comments are closed.