ಕರ್ನಾಟಕ

ದ.ಕ, ಉಡುಪಿ ಜಿಲ್ಲೆ ಸೇರಿ 8 ಜಿಲ್ಲೆಗಳಲ್ಲಿ 18 ದಿನ ಟಫ್ ರೂಲ್ಸ್; ಏನಿರುತ್ತೆ ಇರಲ್ಲ..?

Pinterest LinkedIn Tumblr

ಬೆಂಗಳೂರು: ಕೋವಿಡ್ ಸೋಂಕು ನಿಯಂತ್ರಣಕ್ಕೆ ಲಸಿಕೆ ಅಭಿಯಾನ ಚುರುಕುಗೊಳಿಸಲು ಸರ್ಕಾರ ತಿರ್ಮಾನಿಸಿದ್ದು, ರಾಜ್ಯದಲ್ಲಿ ಲಾಕ್ ಡೌನ್, ಸೆಮಿ ಲಾಕ್ ಡೌನ್, ನೈಟ್ ಕರ್ಫ್ಯೂ ವಿಧಿಸುವುದಿಲ್ಲ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಹೇಳಿದ್ದಾರೆ.ವಿಧಾನಸೌಧದಲ್ಲಿ ಆರೋಗ್ಯ ಇಲಾಖೆ ಮತ್ತಿತ್ತರ ಇಲಾಖಾಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಗಿಂತ ಸೋಂಕು ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜನ ಜಾಗೃತಿ ಮೂಡಿಸಲಾಗುವುದು ಎಂದರು.

(ಸಾಂದರ್ಭಿಕ ಚಿತ್ರ)

ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯಿದೆ ಉಲ್ಲಂಘನೆ ಮಾಡಿದರೆ ಕ್ರಮ ಜರುಗಿಸಬೇಕು. ಕೈಗಾರಿಕಾ ಪ್ರದೇಶ ಮತ್ತು ಅಪಾರ್ಟ್‌ಮೆಂಟ್ ಗಳಲ್ಲಿ ಲಸಿಕೆ ನೀಡಲು ತೀರ್ಮಾನಿಸಲಾಗಿದೆ. ಕೇಂದ್ರದಿಂದ ಮಾಸ್ಕ್, ಸಾಮಾಜಿಕ ಅಂತರ, ನಿಯಮಗಳ ಬಿಗಿ ಪಾಲನೆಗೆ ಸೂಚಿಸಿದ್ದಾರೆ. ರಾಜ್ಯದಲ್ಲೂ ಕಟ್ಟುನಿಟ್ಟಿನ ಪರಿಪಾಲನೆಗೆ ಒತ್ತು ನೀಡಲಾಗುವುದು ಎಂದು ಹೇಳಿದರು.

ಕೋವಿಡ್‌ಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಶೇಕಡಾ 20ರಷ್ಟು ಹಾಸಿಗೆ ಮೀಸಲಿಡಲಾಗಿದೆ. ಜಾತ್ರೆ ಗಳಿಗೆ ಬ್ರೇಕ್ ಹಾಕಲಾಗಿದೆ. ಈ ಬಗ್ಗೆ ಜಿಲ್ಲಾಡಳಿತ ಸೂಕ್ತ ಕ್ರಮ ತೆಗೆದುಕೊಳ್ಳುತ್ತಿದೆ ಎಂದರು.ಲಸಿಕೆ ಹಾಕುವ ಪ್ರಕ್ರಿಯೆಯನ್ನು ಹೆಚ್ಚಿಸಲು ಸೂಚನೆ ನೀಡಿದ್ದೇವೆ. ಸರ್ಕಾರವೇ ಮನೆ ಬಾಗಿಲಿಗೆ ಹೋಗಿ ಲಸಿಕೆ ಹಾಕುವ ಸ್ಥಿತಿ ಸೃಷ್ಟಿಯಾಗಿದೆ. ಹೀಗಾಗಿ ಜನ ಹೆಚ್ಚು ಇರುವ ಕಡೆ ಲಸಿಕೆ ಹಾಕಿಸಲು ಕ್ರ‌ಮ ಕೈಗೊಳ್ಳಲಾಗಿದೆ. ಈಗಾಗಲೇ ಜಾತ್ರೆ, ಉತ್ಸವಗಳನ್ನು ನಿಯಂತ್ರಿಸಿದ್ದೇವೆ. ಶಾಲೆಗಳನ್ನು ಭೌತಿಕವಾಗಿ ನಡೆಸುವುದು ಬೇಡ ಎಂದೂ ನಿರ್ಧರಿಸಲಾಗಿದೆ ಎಂದು ರವಿಕುಮಾರ್ ಸ್ಪಷ್ಟಪಡಿಸಿದರು.

ಸಭೆಯ ನಂತರ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಬೆಂಗಳೂರು ನಗರ ಸೇರಿದಂತೆ ರಾಜ್ಯದ 8 ಜಿಲ್ಲೆಗಳಲ್ಲಿ ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಲಾಗಿದೆ.ಬೆಂಗಳೂರು ನಗರ ಹಾಗೂ ಗ್ರಾಮಾಂತರ ಬಿ ಬಿ ಎಂ ಪಿ ಸೇರಿದಂತೆ, ಮೈಸೂರು, ಕಲಬುರಗಿ, ದಕ್ಷಿಣ ಕನ್ನಡ, ಉಡುಪಿ, ಬೀದರ್ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಪಬ್, ಬಾರ್, ಕ್ಲಬ್, ರೆಸ್ಟೋರೆಂಟ್ ಗಳಲ್ಲಿ ಗರಿಷ್ಠ ಗ್ರಾಹಕ ಸಂಖ್ಯೆ ಶೇ 50 ಮೀರುವಂತಿಲ್ಲ.

ರಾಜ್ಯಾದ್ಯಂತ ಜಿಮ್ ಮತ್ತು ಸ್ವಿಮ್ಮಿಂಗ್ ಫೂಲ್ ಗಳನ್ನು ಸಂಪೂರ್ಣ ಬಂದ್ ಮಾಡಲಾಗುತ್ತಿದೆ. ಸಾರಿಗೆ ಬಸ್ ಗಳಲ್ಲಿ ನಿಗದಿತ ಆಸನದ ಮೀತಿ ಮೀರುವಂತಿಲ್ಲ. ರಾಜ್ಯಾದ್ಯಾಂತ ವಿದ್ಯಾಗಮ ಸೇರಿದಂತೆ ಆರರಿಂದ ಒಂಬತ್ತನೆ ತರಗತಿವರೆಗಿನ ಎಲ್ಲಾ ಶೈಕ್ಷಣಿಕ ಚಟುವಟಿಕೆ ಬಂದ್ ಆಗಲಿದೆ. ಯಾವುದೇ ರೀತಿಯ, ರ್ಯಾಲಿ, ಮುಷ್ಕರ ನಡೆಸುವಂತಿಲ್ಲ ಧಾರ್ಮಿಕ ಆಚರಣೆ, ಜಾತ್ರೆ ನಿಷೇಧ. ಏಪ್ರಿಲ್ 20ರ ವರೆಗೆ ಈ ಮಾರ್ಗಸೂಚಿ ಅನ್ವಯವಾಗಲಿದೆ.

 

Comments are closed.