ಕರ್ನಾಟಕ

ರಮೇಶ್ ಜಾರಕಿಹೊಳಿಗೆ ಕೊರೋನಾ‌ ಪಾಸಿಟಿವ್ ದೃಢ: ಗೋಕಾಕ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ?

Pinterest LinkedIn Tumblr

ಬೆಂಗಳೂರು: ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿಗೆ ಕೊರೋನಾ ಪಾಸಿಟಿವ್‌ ದೃಢಪಟ್ಟಿದೆ.

ಏಪ್ರಿಲ್ 1ರಂದು ಆಸ್ಪತ್ರೆಗೆ ಬಂದಿದ್ದ ರಮೇಶ್ ಜಾರಕಿಹೊಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿರುವ ಬಗ್ಗೆ ಗೋಕಾಕ್ ಆಸ್ಪತ್ರೆಯ ಟಿಹೆಚ್ಒ ಡಾ. ಮುತ್ತಣ್ಣ ಕೋಪದ್ ಹೇಳಿದ್ದಾರೆ.

ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಅವರು ಎಸ್ಐಟಿ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ನಿನ್ನೆ ರಾತ್ರಿ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು ಅವರ ಬಿಪಿ, ಶುಗರ್ ನಲ್ಲಿ ಏರುಪೇರಾಗಿದ್ದರಿಂದ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಅವರಿಗೆ ಕೊರೋನಾ ಸೋಂಕು ದೃಢಪಟ್ಟಿರುವುದರಿಂದ ಕೋವಿಡ್ ನಿಯಮದಂತೆ 5 ದಿನಗಳ ಕಾಲ ಆಸ್ಪತ್ರೆಯಲ್ಲಿ ಇರಬೇಕಾಗುತ್ತದೆ ಎಂದು ಗೋಕಾಕ್ ತಾಲೂಕು ಆಸ್ಪತ್ರೆಯ ವೈದ್ಯ ಡಾ. ರವೀಂದ್ರ ಹೇಳಿದ್ದಾರೆ.

 

Comments are closed.