ಕರ್ನಾಟಕ

ಮದುವೆ ವಿಚಾರದಲ್ಲಿ ಮನನೊಂದ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರು ಆತ್ಮಹತ್ಯೆ ಯತ್ನ

Pinterest LinkedIn Tumblr

ಕೋಲಾರ: ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಕೋಲಾರದ ಕುರುಬರ ಪೇಟೆ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ವರದಿಯಾಗಿದೆ.

ಮದುವೆ ವಿಚಾರವಾಗಿ ವಿವಾದಕ್ಕೀಡಾಗಿದ್ದ ಇವರು ಸದ್ಯ ಮನನೊಂದು ಪಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಇವರನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚೈತ್ರಾ ಕೋಟೂರ್ ಮಂಡ್ಯ ಮೂಲದ ರಿಯಲ್​ ಎಸ್ಟೇಟ್​ ಉದ್ಯಮಿ ನಾಗಾರ್ಜುನ್​ ಎಂಬುವವರನ್ನು ಮಾ.28ರಂದು ಮದುವೆಯಾಗಿದ್ದರು. ಮದುವೆ ದಿನವೆ ವಿವಾದಕ್ಕೀಡಾಗಿದ್ದ ಚೈತ್ರಾ ಪೊಲೀಸ್ ಠಾಣೆಯ ಮಟ್ಟಿಲೇರಿದ್ದರು. ಮದುವೆ ವಿಚಾರವಾಗಿ ಮನನೊಂದ ನಟಿ, ಕವಯಿತ್ರಿ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ.

 

Comments are closed.