ಕರಾವಳಿ

ಕುದ್ರೋಳಿಯ ಮೌಲನಾ ಆಜಾದ್ ಮಾದರಿ ಶಾಲೆ ಅಭಿವೃದ್ಧಿಗೆ 2.35 ಕೋಟಿ ವೆಚ್ಚದಲ್ಲಿ ಗುದ್ದಲಿಪೂಜೆ

Pinterest LinkedIn Tumblr

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಕುದ್ರೋಳಿ ವಾರ್ಡಿನ ಮೌಲನಾ ಆಜಾದ್ ಮಾದರಿ ಶಾಲೆಗೆ 2.35 ಕೋಟಿ ವೆಚ್ಚದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಅಭಿವೃದ್ಧಿ ಎಂದರೆ ಕೇವಲ ರಸ್ತೆ, ತೋಡುಗಳ ಅಭಿವೃದ್ಧಿ ಮಾತ್ರವಲ್ಲ ಬದಲಾಗಿ ಶಿಕ್ಷಣ ಪಡೆಯುವ ಶಾಲೆಗಳನ್ನು ಉನ್ನತೀಕರಿಸಿದಾಗ ಅಭಿವೃದ್ಧಿ ಎನ್ನುವುದಕ್ಕೆ ನಿಜವಾದ ಅರ್ಥ ಬರುತ್ತದೆ ಎಂದು ಹೇಳಿದರು.

ಶಿಕ್ಷಣ ಸಂಸ್ಥೆಗಳು ಜವಬ್ದಾರಿಯುತ ಸತ್ಪ್ರಜೆಗಳನ್ನು ಸೃಷ್ಟಿಸುವ ಕಾರ್ಖಾನೆ ಇದ್ದಂತೆ. ಹಾಗಾಗಿ ಶಿಕ್ಷಣ ವ್ಯವಸ್ಥೆಗೆ ಹೆಚ್ಚಿನ ಪ್ರಾಧಾನ್ಯತೆ ನೀಡುತಿದ್ದೇವೆ. ಶಾಲಾ ಕಾಲೇಜುಗಳ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ ಎಂದು ನುಡಿದರು.

ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ ಮಾತನಾಡಿ, ಅಭಿವೃದ್ಧಿಯ ಚಿಂತನೆಯೊಂದಿಗೆ ಯಾವುದೇ ತೆರನಾದ ರಾಜಕೀಯ ಮಾಡದೆ ಶಾಸಕ ವೇದವ್ಯಾಸ್ ಕಾಮತ್ ಅವರು ಸರ್ವರನ್ನೂ ಜೊತೆಗೂಡಿಸಿ ಕರೆದೊಯ್ಯುತಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಯ ಎಲ್ಲಾ ವಾರ್ಡುಗಳಿಗೂ ಅನುದಾನಗಳ ಮಹಾಪೂರವನ್ನೇ ಹರಿಸಿದ್ದಾರೆ ಎಂದರು.

ಸ್ಥಳೀಯ ಮನಪಾ ಸದಸ್ಯರಾದ ಶಂಶುದ್ದೀನ್ ಮಾತನಾಡಿ ನನ್ನ ವಾರ್ಡಿನ ಶಾಲೆಯನ್ನು ಅಭಿವೃದ್ಧಿ ಪಡಿಸಲು ಅನುದಾನ ಒದಗಿಸಿದ ಶಾಸಕರಾದ ಡಿ. ವೇದವ್ಯಾಸ್ ಕಾಮತ್ ಅವರಿಗೆ ಧನ್ಯವಾದಗಳು. ಹಾಗೂ ಮುಂಬರುವ ದಿನಗಳಲ್ಲಿ ವಾರ್ಡಿನ ಅಭಿವೃದ್ಧಿಗೆ ರೆಚ್ಚಿನ ಸಹಕಾರ ನೀಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಉಪಮಹಾಪೌರರಾದ ಸುಮಂಗಲ ರಾವ್, ಸ್ಥಾಯಿ ಸಮಿತಿಯ ಅದ್ಯಕ್ಷರಾದ ಸಂದೀಪ್ ಗರೋಡಿ, ಲೋಕೇಶ್ ಬೊಳ್ಳಾಜೆ, ಲೀಲಾವತಿ ಪ್ರಕಾಶ್, ಶೋಭಾ ರಾಜೇಶ್, ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಜಗದೀಶ್ ಶೆಟ್ಟಿ ಬೋಳೂರು, ಚಂದ್ರಾವತಿ ವಿಶ್ವನಾಥ್, ಸಂಧ್ಯಾ ಮೋಹನ್ ಆಚಾರ್, ಜಯಶ್ರೀ ಕುಡ್ವ, ಪೂರ್ಣಿಮಾ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ರಮೇಶ್ ಹೆಗ್ಡೆ, ಭವಾನಿ ಶಂಕರ್, ಅರ್ಶಾದ್ ಪೋಪಿ, ಪ್ರಕಾಶ್ ಸಾಲ್ಯಾನ್, ಮೋಹನ್ ಆಚಾರ್, ಗಿರೀಶ್ ಕರ್ಕೇರ, ಹನೀಫ್ ಕುದ್ರೋಳಿ ಮತ್ತಿತರರು ಉಪಸ್ಥಿತರಿದ್ದರು.

Comments are closed.