ಕರಾವಳಿ

ಧಾರ್ಮಿಕ ಕಾರ್ಯಕ್ರಮಗಳಿಗೆ ಕೊರೋನಾ ಕರ್ಫ್ಯೂವಿನಿಂದ ವಿನಾಯಿತಿ ನೀಡುವಂತೆ ವಿಹಿಂಪ ಮನವಿ

Pinterest LinkedIn Tumblr

ಮಂಗಳೂರು, ಎಪ್ರಿಲ್.09: ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಗಳಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಿಗೆ ಕೊರೋನಾ ಕರ್ಫ್ಯೂವಿನಿಂದ ವಿನಾಯಿತಿ ನೀಡುವಂತೆ ವಿಶ್ವ ಹಿಂದು ಪರಿಷದ್ ಸರ್ಕಾರಕ್ಕೆ ಮನವಿ ಮಾಡಿದೆ.

ಈಗಾಗಲೇ ಸರಕಾರ ಏಪ್ರಿಲ್ 10 ರಿಂದ ರಾತ್ರಿ 10 ಗಂಟೆಯಿಂದ ಬೆಳ್ಳಿಗ್ಗೆ 5 ಗಂಟೆ ವರೆಗೆ ಕರ್ಫ್ಯೂ ಜಾರಿಗೊಳಿಸಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಈಗಾಗಲೇ ಸಾಕಷ್ಟು ಧಾರ್ಮಿಕ ಕಾರ್ಯಕ್ರಮಗಳಾದ ಜಾತ್ರೆ, ನೇಮ ಕೋಲಗಳು, ಬ್ರಹ್ಮಕಲಶ, ಹಾಗು ಯಕ್ಷಗಾನ ಮುಂತಾದ ಕಾರ್ಯಕ್ರಮಗಳು ಈಗಾಗಲೇ ನಿರ್ಧರಿಸಲಾಗಿದೆ.

ಇದೀಗ ಅವಳಿ ಜಿಲ್ಲೆಯಲ್ಲಿ ಕರ್ಫ್ಯೂ ಜಾರಿಗೊಳಿಸಿರುವುದರಿಂದ ಈ ಧಾರ್ಮಿಕ ಕಾರ್ಯಕ್ರಮಗಳು ನಡೆಯದಂತಾಗುತ್ತವೆ.

ಆದುದರಿಂದ ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಗಳಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ ಕೊರೋನಾ ಕರ್ಫ್ಯೂವಿನಿಂದ ವಿನಾಯಿತಿ ನೀಡಲು ರಾಜ್ಯಸರ್ಕಾರಕ್ಕೆ ಮನವಿ ಮಾಡುತಿದ್ದೇವೆ ಎಂದು ವಿಶ್ವ ಹಿಂದು ಪರಿಷದ್ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.