ಕರಾವಳಿ

ಸಚಿವ ಕೋಟಾ ಶ್ರೀನಿವಾಸ್ ಪೂಜಾರಿಯವರಿಗೆ ಕೊರೊನಾ ಪಾಸಿಟಿವ್ : ಆಸ್ಪತ್ರೆಗೆ ದಾಖಲು

Pinterest LinkedIn Tumblr

ಮಂಗಳೂರು, ಎಪ್ರಿಲ್. 10 : ದ.ಕ ಜಿಲ್ಲಾ ಉತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಧೃಡಪಟ್ಟಿದೆ.

ಕೊರೊನಾ ಪಾಸಿಟಿವ್ ಕಾರಣಕ್ಕೆ ನಾನು ಆಸ್ಪತ್ರೆಗೆ ದಾಖಲಾಗಿದ್ದು, ಅನಿವಾರ್ಯವಾದರೆ ದೂರವಾಣಿ ಮೂಲಕ ಸಂಪರ್ಕಿಸಬಹುದು. ಒಂದೆರಡು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್-19 ಟೆಸ್ಟ್ ಮಾಡಿಸಿಕೊಳ್ಳಿ ಎಂದು ಅವರು ತಮ್ಮ ಟ್ವೀಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ದ.ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂದಿಸಿದಂತೆ ಜಿಲ್ಲಾಡಳಿತ ಎಲ್ಲಾ ಅವಶ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್19 ಸೋಂಕು ಹರಡುವಿಕೆ ಉಲ್ಬಣವಾಗಿದ್ದು, ನಿಯಂತ್ರಣ ಕಾರ್ಯ ಅವಶ್ಯಕವಾಗಿರುವುದರಿಂದ ರಾಜ್ಯ ಸರ್ಕಾರವು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಏ. 10 ರಿಂದ 20 ರ ವರೆಗೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5ಗಂಟೆಯವರೆಗೆ ಮುಂದಿನ ಆದೇಶದವರೆಗೆ ಕೊರೋನಾ ಕರ್ಫ್ಯೂ ಜಾರಿಗೊಳಿಸಿ ಆದೇಶಿಸಿದೆ.

Comments are closed.