ಕರಾವಳಿ

ಸ್ಥಳ ಬದಲಾವಣೆ : ನಾಳೆ ಮಂಗಳೂರಿನ ಪುರಭವನದಲ್ಲಿ ಡಾ. ಬಿ. ಆರ್.ಅಂಬೇಡ್ಕರ್ ಅವರ 130ನೇ ಜನ್ಮ ದಿನಾಚರಣೆ ಕಾರ್ಯಕ್ರಮ

Pinterest LinkedIn Tumblr

ಮಂಗಳೂರು, ಏಪ್ರಿಲ್ 13 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಎಪ್ರಿಲ್ 14 ರಂದು ಬೆಳಿಗ್ಗೆ 10 ಗಂಟೆಗೆ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್‍ರವರ 130ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳ ಕಚೇರಿಯ ಬದಲಾಗಿ ನಗರದ ಪುರಭವನದಲ್ಲಿ ಆಯೋಜಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ.

ಮೀನುಗಾರಿಕೆ ಹಾಗೂ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತರಿರುವರು. ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್‍ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್‍ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರಾದ ಯು.ಟಿ.ಖಾದರ್, ಡಾ.ಭರತ್ ಶೆಟ್ಟಿ ವೈ, ಹರೀಶ್ ಪೂಂಜ, ರಾಜೇಶ್ ನಾಯ್ಕ್‍ ಯು, ಸಂಜೀವ ಮಠಂದೂರು, ಉಮಾನಾಥ್ ಎ. ಕೋಟ್ಯಾನ್, ವಿಧಾನ ಪರಿಷತ್‍ನ ಶಾಸಕರಾದ ಕೆ.ಪ್ರತಾಪಚಂದ್ರ ಶೆಟ್ಟಿ, ಬಿ.ಎಂ.ಫಾರೂಕ್, ಕೆ. ಹರೀಶ್‍ಕುಮಾರ್, ಆಯನೂರು ಮಂಜುನಾಥ, ಎಸ್. ಎಲ್. ಭೋಜೇಗೌಡ, ಪ್ರತಾಪಸಿಂಹ ನಾಯಕ್ ಕೆ., ಕರ್ನಾಟಕ ಮೀನುಗಾರಿಕೆಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷ ನಿತಿನ್‍ಕುಮಾರ್, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್, ಬೆಂಗಳೂರು ಇದರ ಅಧ್ಯಕ್ಷ ಸಂತೋಷ ರೈ ಬೋಲಿಯಾರ್, ಕರ್ನಾಟಕ ಅಲೆಮಾರಿ/ಅರೆಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ, ಮಂಗಳೂರು ಮಹಾನಗರಪಾಲಿಕೆ ಮಹಾಪೌರರಾದ ಪ್ರೇಮಾನಂದ ಶೆಟ್ಟಿ,ಉಪ ಮಹಾಪೌರರಾದ ಸುಮಂಗಳ ರಾವ್, ಜಿಲ್ಲಾ ಪಂಚಾಯತ್‍ ಉಪಾಧ್ಯಕ್ಷೆ ಕಸ್ತೂರಿ ಪಂಜ, ತಾಲೂಕು ಪಂಚಾಯತ್‍ ಅಧ್ಯಕ್ಷ ಮೊಹಮ್ಮದ್ ಮೋನು, ತಾಲೂಕು ಪಂಚಾಯತ್‍ ಉಪಾಧ್ಯಕ್ಷೆ ಪೂರ್ಣಿಮಾ ಗಣೇಶ್ ಪೂಜಾರಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಸುರತ್ಕಲ್‍ ಗೋವಿಂದದಾಸ ಕಾಲೇಜಿನ ರಾಜ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ರಾದ ಡಾ. ಆಶಾಲತಾ ಪಿ.ಉಪನ್ಯಾಸ ನೀಡಲಿದ್ದಾರೆ.

Comments are closed.