ಕರಾವಳಿ

ಬೋಳೂರು ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿ ಆಡಳಿತ ಬದ್ದ: ಶಾಸಕ ಕಾಮಾತ್

Pinterest LinkedIn Tumblr

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಬೋಳೂರು ವಾರ್ಡಿನ ದೇವರಾಯ ಕಾಂಪೌಂಡ್ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.

ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್, ಬೋಳೂರು ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಆಡಳಿತ ಬದ್ಧವಾಗಿದೆ. ವಾರ್ಡಿನ ಜನತೆಯ ಬೇಡಿಕೆಯನ್ನು ಪೂರೈಸಲು ಸ್ಥಳೀಯ ಮನಪಾ ಸದಸ್ಯರಾದ ಜಗದೀಶ್ ಶೆಟ್ಟಿ ಅವರು ಶ್ರಮಿಸುತಿದ್ದಾರೆ. ಅಭಿವೃದ್ಧಿಯ ನೆಲೆಯಲ್ಲಿ ಸಾರ್ವಜನಿಕರು ಸಹಕಾರ ನೀಡಬೇಂದು ಹೇಳಿದರು.

ದೇವರಾಯ ಕಾಂಪೌಂಡ್ ರಸ್ತೆ ಅಭಿವೃದ್ಧಿಯ ಕುರಿತು ಸ್ಥಳೀಯ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿದ್ದರು. ಹಾಗಾಗಿ ಅನುದಾನ ಬಿಡುಗಡೆಗೊಳಿಸಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಬೋಳೂರು, ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷರಾದ ಲೀಲಾವತಿ ಪ್ರಕಾಶ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ಕಾರ್ತಿಕ್ ಬಂಗೇರ, ಉಮಾಶಂಕರ್, ದಿನೇಶ್ ಕರ್ಕೇರ, ಗೋಪಾಲ್ ಬಂಗೇರ, ರಾಧಾಕೃಷ್ಣ ಶೇಟ್, ಪುರಂದರ ಶೆಟ್ಟಿ, ರಘು ಸಾಲ್ಯಾನ್, ಗಣೇಶ್ ನಾಡಾರ್, ಪುರುಷೋತ್ತಮ, ಕೀರ್ತಿ ಕರ್ನಲ್ ಗಾರ್ಡನ್, ಗಜಾನನ ಪೈ, ಪ್ರಕಾಶ್ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

Comments are closed.