ಕರಾವಳಿ

ರಾಜಕೀಯ ಕಾರ್ಯಕ್ರಮಗಳಿಗೆ ಅನುಮತಿ- ಧಾರ್ಮಿಕ ಕಾರ್ಯಕ್ರಮಕ್ಕೆ ನಿರ್ಬಂಧ: ಸರಕಾರದ ಆದೇಶಕ್ಕೆ ವಿಶ್ವ ಹಿಂದು ಪರಿಷದ್ ತೀವ್ರ ವಿರೋಧ

Pinterest LinkedIn Tumblr

ಮಂಗಳೂರು : ಕೋರೋಣ ನಿಯಂತ್ರಿಸಲು ರಾಜ್ಯಸರ್ಕಾರ ಆದೇಶ ಹೊರಡಿಸಿದ್ದು ರಾಜಕೀಯ,ಮದುವೆ ಸಮಾರಂಭಗಳಿಗೆ ಅನುಮತಿ ನೀಡಿ ಧಾರ್ಮಿಕ ಕಾರ್ಯಕ್ರಮಕ್ಕೆ ನಿರ್ಬಂಧ ಹೇರಿರುವುದನ್ನು ವಿಶ್ವ ಹಿಂದು ಪರಿಷದ್ ವಿರೋಧಿಸುತ್ತದೆ ಎಂದು ವಿಶ್ವ ಹಿಂದು ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ತಿಳಿಸಿದ್ದಾರೆ.

ಕಳೆದ 2 ತಿಂಗಳುಗಳಲ್ಲಿ ಸಾಕಷ್ಟು ಕಡೆ ದೈವಾರಾಧನೆಯ ನೇಮ, ಕೋಲಗಳು, ಜಾತ್ರೆ, ನಾಗಮಂಡಲ, ಬ್ರಹ್ಮಕಲಶ, ಯಕ್ಷಗಾನದಂತಹ ಧಾರ್ಮಿಕ ಕಾರ್ಯಕ್ರಮಗಳ ದಿನಾಂಕ ನಿಗದಿಯಾಗಿದ್ದು ತಯಾರಿ ಕೂಡ ನಡೆದಿರುತ್ತದೆ.

ಈಗಾಗಲೇ ಕೆಲವು ದೇವಸ್ಥಾನಗಳ ಬ್ರಹ್ಮಕಲಶ ಪ್ರಾರಂಭವಾಗಿದೆ. ಆದರೆ ತಕ್ಷಣ ಸರಕಾರ ಕೋವಿಡ್ ಕಾರಣದಿಂದ ಧಾರ್ಮಿಕ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಿರುವುದು ಸರಿಯಲ್ಲ.

ಈ ಬಗ್ಗೆ ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿ ಜಿಲ್ಲೆಯಲ್ಲಿನ ಧಾರ್ಮಿಕ ಕಾರ್ಯಕ್ರಮಗಳ ಬಗ್ಗೆ ಮನವರಿಕೆ ಮಾಡಲಾಗಿದೆ. .ಈ ವೇಳೆ ಶ್ರೀಧಾಮ ಮಾಣಿಲದ ಮೋಹನದಾಸ ಸ್ವಾಮಿಜೀ, ಜಿಲ್ಲಾಧ್ಯಕ್ಷರು ಗೋಪಾಲ್ ಕುತ್ತಾರ್, ಬಿಜೆಪಿಯ ಪ್ರಮುಖರಾದ ಜಗದೀಶ್ ಶೇಣವ ಜೊತೆಗಿದ್ದರು.

ಸರಕಾರ ತಕ್ಷಣ ಈ ಆದೇಶವನ್ನು ಹಿಂಪಡೆದು ಕೋವಿಡ್ ನಿಯಮಾವಳಿ ಪ್ರಕಾರ ಸೀಮಿತ ಸಂಖ್ಯೆಯಲ್ಲಿ ಸಾಮಾಜಿಕ ಅಂತರ ಕಾಪಾಡಿ, ರಾಜಕೀಯ, ಮದುವೆ ಕಾರ್ಯಕ್ರಮದ ರೀತಿಯಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ನೀಡಬೇಕೆಂದು ಸರಕಾರಕ್ಕೆ ವಿಶ್ವ ಹಿಂದು ಪರಿಷತ್ ಒತ್ತಾಯ ಮಾಡುತ್ತದೆ ಎಂದು ಶರಣ್ ಪಂಪವೆಲ್ ತಿಳಿಸಿದ್ದಾರೆ.

 

Comments are closed.