ಕರಾವಳಿ

ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಉದ್ಯೋಗ -ಎಪ್ರಿಲ್ 22 ರಂದು ನೇರ ಸಂದರ್ಶನ

Pinterest LinkedIn Tumblr

ಮಂಗಳೂರು, ಎಪ್ರಿಲ್ 20 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯಾದ್ಯಂತ ಕೋವಿಡ್ – 19 ನಿಯಂತ್ರಣ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಅಧೀನದಲ್ಲಿರುವ ಸಂಸ್ಥೆಗಳಲ್ಲಿ ಪ್ರಸ್ತುತ ಸಾಲಿನ ಸೆಪ್ಟೆಂಬರ್ 30ರ ವರೆಗೆ ಕರ್ತವ್ಯ ನಿರ್ವಹಿಸಲು ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ.

ಹುದ್ದೆಗಳು: ಲ್ಯಾಬ್ ಟೆಕ್ನೀಷನ್-3, ಫಾರ್ಮಸಿಸ್ಟ್ -8 ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಎಪ್ರಿಲ್ 22 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಲೋಕೋಪಯೋಗಿ ಕಟ್ಟಡ ಸಂಕೀರ್ಣ, ನೆಹರು ಮೈದಾನ ರಸ್ತೆ, ಮಂಗಳೂರು. ದೂರವಾಣಿ ಸಂಖ್ಯೆ: 0824-2423672 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.

Comments are closed.