ಕರಾವಳಿ

ಶಾಸಕ ಕಾಮತ್ ಅವರಿಂದ ಕಣ್ಣೂರು ವಾರ್ಡಿನ ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

Pinterest LinkedIn Tumblr

ಮಂಗಳೂರು : ಕಳೆದ ಎರಡು ವರ್ಷಗಳ ಅವಧಿಯಲ್ಲಿ ಬಾಕಿಯಿರುವ‌ ಅನೇಕ ಹಕ್ಕುಪತ್ರಗಳನ್ನು ವಿತರಿಸಲಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು.

ಅವರು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಣ್ಣೂರು ವಾರ್ಡಿನ ಎರಡು ಕುಟುಂಬಗಳಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಹಕ್ಕುಪತ್ರ ವಿತರಿಸಿ ಮಾತನಾಡಿದರು. ಶಾಸಕನಾದ ಪ್ರಾರಂಭದಿಂದಲೂ ಅರ್ಹ ಫಲಾನುಭವಿಗಳಿಗೆ ನೀಡಲು ಬಾಕಿಯಿದ್ದ ಹಕ್ಕುಪತ್ರಗಳನ್ನು ವಿತರಿಸಲಾಗಿದೆ ಎಂದರು.

ಪ್ರತಿಯೊಬ್ಬ ಮನುಷ್ಯನಿಗೂ ಸ್ವಂತ ಮನೆಯ ಕನಸಿರುತ್ತದೆ. ಕಾನೂನಿನ್ವಯ ಅವರಿಗೆ ಸಲ್ಲಬೇಕಾದ ಸವಲತ್ತುಗಳನ್ನು ಒದಗಿಸಿದರೆ ಜನಪ್ರತಿನಿಧಿ ಆಗಿದ್ದೂ ಸಾರ್ಥಕ ಎಂದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಕಣ್ಣೂರು ವಾರ್ಡ್ ಕಾರ್ಪೋರೇಟರ್ ಚಂದ್ರಾವತಿ ವಿಶ್ವನಾಥ್, ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಸಂದೀಪ್ ಗರೋಡಿ ಉಪಸ್ಥಿತರಿದ್ದರು.

Comments are closed.