ಕರಾವಳಿ

ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ನಿಂದ ‘ಬಿಸು ಪರ್ಬೊ’ ಆಚರಣೆ

Pinterest LinkedIn Tumblr

ಮಂಗಳೂರು : ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ವತಿಯಿಂದ ‘ಬಿಸು ಪರ್ಬೊ’ ಆಚರಣೆ ನಗರದ ಬಲ್ಮಠ ಕುಡ್ಲ ಪೆವಿಲಿನ್ ಸಭಾಂಗಣದಲ್ಲಿ ಜರಗಿತು.

‘ಬಿಸು ಪರ್ಬೊ’ ಕಾರ್ಯಕ್ರಮವನ್ನು ಟ್ರಸ್ಟ್ ಸ್ಥಾಪಕಾಧ್ಯಕ್ಷ ಎ.ಸದಾನಂದ ಶೆಟ್ಟಿ ಉದ್ಘಾಟಿಸಿದರು. ಲೇಖಕಿ ರೂಪಕಲಾ ಆಳ್ವ ಬಿಸು ಸಂದೇಶ ನೀಡಿದರು.

ಮಂಗಳೂರು ಮಹಾನಗರಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಅವರನ್ನು ಈ ಸಂದರ್ಭ ಸನ್ಮಾನಿಸಲಾಯಿತು. ಕಾರ್ಮಿಕ ನಾಯಕ ಎಂ.ಸುರೇಶ್ಚಂದ್ರ ಶೆಟ್ಟಿ, ಯುವ ವಿಭಾಗದ ಅಧ್ಯಕ್ಷ ದೇವಿಚರಣ್ ಶೆಟ್ಟಿ ಉಪಸ್ಥಿತರಿದ್ದರು.

‘ಸದಾಶಯ’ ತ್ರೈಮಾಸಿಕದ ಪ್ರಧಾನ ಸಂಪಾದಕ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಸ್ವಾಗತಿಸಿ ಪ್ರಸ್ತಾವನೆಗೈದರು. ಸಂಘಟನಾ ಕಾರ್ಯದರ್ಶಿ ರಾಜಗೋಪಾಲ್ ರೈ ಅಭಿನಂದನಾ ಭಾಷಣ ಮಾಡಿದರು. ಪ್ರಧಾನ ಕಾರ್ಯದರ್ಶಿ ಡಾ.ವಸಂತಕುಮಾರ್ ಶೆಟ್ಟಿ ನಿರೂಪಿಸಿ, ಮಹಿಳಾ ವಿಭಾಗದ ವಿಜಯಲಕ್ಷ್ಮಿ ಬಿ.ಶೆಟ್ಟಿ ವಂದಿಸಿದರು.

Comments are closed.