
ಮಂಗಳೂರು: ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಪೊಲೀಸ್ ಕಮಿಷನರ್, ಡಿಸಿಪಿ ಮತ್ತು ಪೊಲೀಸ್ ಸಿಬ್ಬಂದಿಗಳ ಮೇಲೆ ಖೈದಿಗಳು ಹಲ್ಲೆ ನಡೆಸಿರುವುದನ್ನು ವಿಶ್ವ ಹಿಂದೂ ಪರಿಷತ್ ತೀವ್ರವಾಗಿ ಖಂಡಿಸುತ್ತದೆ ಎಂದು ವಿಶ್ವ ಹಿಂದೂ ಪರಿಷದ್ ವಿಭಾಗ ಕಾರ್ಯದಶಿ ಶರಣ್ ಪಂಪವೆಲ್ ತಿಳಿಸಿದ್ದಾರೆ.
ಪೊಲೀಸ್ ಕಮಿಷನರ್ ಶಶಿಕುಮಾರ್, ಡಿಸಿಪಿ ಹರಿ ರಾಮ್ ಇನ್ಸ್ ಪೆಕ್ಟರ್ ಜ್ಯೋತಿರ್ಲಿಂಗ ಮತ್ತು ಜೈಲರ್ ಚಂದನ್ ಪಾಟೀಲ್ ರವರು ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಪರಿಶೀಲನೆಗೆ ತೆರಳಿದಾಗ ಸಮೀರ್ ಎಂಬಾತನನ್ನು ವಿಚಾರಣೆ ಸಂಧರ್ಭದಲ್ಲಿ 15 ಕ್ಕೂ ಹೆಚ್ಚು ಕೈದಿಗಳಿಂದ ಹಲ್ಲೆ ನಡೆಸಿರುವುದು ಬಹಳ ಆತಂಕಕಾರಿ ವಿಷಯವಾಗಿದೆ.
ವಿಶ್ವ ಹಿಂದೂ ಪರಿಷದ್ ಈ ಪ್ರಕರಣವನ್ನು ಖಂಡಿಸುವುದರ ಮೂಲಕ ತಕ್ಷಣ ಆರೋಪಿಗಳನ್ನು ಕಾನೂನಿನ ಅಡಿಯಲ್ಲಿ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸುತ್ತದೆ ಎಂದು ಶರಣ್ ಪಂಪವೆಲ್ ಆಗ್ರಹಿಸಿದ್ದಾರೆ.
Comments are closed.