ಕರಾವಳಿ

ಜನಸಾಮಾನ್ಯರಿಗೆ ಕಾನೂನು ನೆರವು ಬೇಕಾದಲ್ಲಿ ಈ ಸಹಾಯವಾಣಿಗೆ ಕರೆ ಮಾಡಿ

Pinterest LinkedIn Tumblr

ಮಂಗಳೂರು, ಎಪ್ರಿಲ್ 30 : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಜನ ಸಾಮಾನ್ಯರಿಗೆ ಕಾನೂನು ಸೇವೆ ಒದಗಿಸಲು 1800-425-90900 ಸಹಾಯವಾಣಿಯು ಕಾರ್ಯ ನಿರ್ವಹಿಸುತ್ತಿದೆ.

ಈ ಸಹಾಯವಾಣಿ ಕೇಂದ್ರದಲ್ಲಿ ಮೂರು ಜನ ಪ್ಯಾನಲ್ ಅಡ್ವೋಕೇಟ್‍ಗಳು ಕಾರ್ಯನಿರ್ವಹಿಸುತ್ತಿರುತ್ತಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ ಸಹ ಕಾನೂನು ಸೇವಾ ಸಹಾಯವಾಣಿ ಸಂಖ್ಯೆ :0824-2448111, ಮೊ.ಸಂಖ್ಯೆ: 9480024188 ಯಾಗಿ ಕಾರ್ಯನಿರ್ವಹಿಸುತ್ತಿದೆ.

ಸಾರ್ವಜನಿಕರು ಈ ಸಹಾಯವಾಣಿಯ ಸದುಪಯೋಗ ಪಡಿಸಿಕೊಳ್ಳಬೇಕೆಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.