ಕರಾವಳಿ

ವೆಂಟಿಲೇಟರ್‍ಗಳನ್ನು ಒಳಗೊಂಡ ಆಂಬುಲೆನ್ಸ್‍ಗಳ ಸಿದ್ಧತೆಗೆ ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಡಿಸಿ ಸೂಚನೆ

Pinterest LinkedIn Tumblr

ಮಂಗಳೂರು : ಮುಂಬರುವ ದಿನಗಳಲ್ಲಿ ಕೋವಿಡ್ ಪ್ರಕರಣಗಳು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಂತವರಿಗೆ ಚಿಕಿತ್ಸೆ ನೀಡಲು ವೆಂಟಿಲೇಟರ್‍ಗಳು ಹಾಗೂ ವೆಂಟಿಲೇಟರ್‍ಗಳನ್ನು ಒಳಗೊಂಡ ಆಂಬುಲೆನ್ಸ್‍ಗಳನ್ನು ಜಿಲ್ಲಾಡಳಿತದಿಂದ ಒದಗಿಸಲಾಗುವುದು. ಅದಕ್ಕೆ ಅಗತ್ಯವಿರುವ ಸಿದ್ಧತೆಗಳನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಸೂಚಿಸಿದರು.

ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ನಡೆದ ವೈದ್ಯಕೀಯ ತಜ್ಞರ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ಕೊರತೆ ಇರುವಲ್ಲಿ ವೈದ್ಯರುಗಳು ಹಾಗೂ ವೈದ್ಯಕೀಯ ಸಿಬ್ಬಂದಿಗಳನ್ನು ತುಂಬಲಾಗುವುದು ಎಂದರು.

ಜಿಲ್ಲೆಯಲ್ಲಿ ಕೆಲವು ಖಾಸಗಿ ಸಂಸ್ಥೆಗಳು ಧಾರ್ಮಿಕ ಸಂಸ್ಥೇಗಳು ಕೋವಿಡ್ ಕೇರ್ ಸೆಂಟರ್ ಗಳನ್ನು ತೆಗೆಯಲು ಮುಂದೆ ಬರುತ್ತಿವೆ. ಈ ರೀತಿ ಕೋವಿಡ್ ಕೇರ್ ಸೆಂಟರ್ ಗಳನ್ನು ತೆಗೆಯುವ ಮುನ್ನ ರೋಗಿಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಬಗ್ಗೆ ಜಿಲ್ಲಾ ಆರೋಗ್ಯ ಅಧಿಕಾರಿಗಳು ಪರಿಶೀಲನೆ ನಡೆಸಿ ಒಪ್ಪಿಗೆ ನೀಡಿದ ನಂತರ ತೆರೆಯಲು ಮುಂದಾಗಬೇಕು ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಸಭೆಯಲ್ಲಿ ಶಾಸಕ ಭರತ್ ವೈ. ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕುಮಾರ್, ಅಪರ ಜಿಲ್ಲಾಧಿಕಾರಿ ದಿನೇಶ್, ಉಪವಿಭಾಗಾಧಿಕಾರಿ ಮಧನ್ ಮೋಹನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್, ಜಿಲ್ಲಾ ಶಸ್ತ್ರ ಚಿಕಿತ್ಸಕರು ಮತ್ತು ಅಧೀಕ್ಷಕರಾದ ಡಾ. ಸದಾಶಿವ ಶ್ಯಾನುಬೋಗ್, ಲೇಡಿಘೋಷನ್ ಆಸ್ಪತ್ರೆಯ ಮೆಡಿಕಲ್ ಸೂಪರಿಡೆಂಟ್ ಡಾ. ದುರ್ಗಾ ಪ್ರಸಾದ್ ಎಂ.ಆರ್, ಡಾ. ಚಕ್ರಪಾಣಿ, ಡಾ. ಅಭಯ ನಿರ್ಗುಡೆ, ಡಾ. ಶ್ರೀಪಾದ ಜಿ. ಮಚಂದಳಿ, ಮತ್ತಿತರ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

Comments are closed.