ಕರಾವಳಿ

ದ.ಕ.ಜಿಲ್ಲೆಯಲ್ಲಿ ನಾಳೆಯಿಂದ ಟಫ್ ರೂಲ್ಸ್ ಜಾರಿ : ಕರ್ಪ್ಯೂ ಸಮಯದಲ್ಲಿ ಬದಲಾವಣೆ- ಅನಗತ್ಯ ಓಡಾಟಕ್ಕೆ ಕಡಿವಾಣ – ವಾಹನ ಸೀಜ್‌ಗೆ ಆದೇಶ

Pinterest LinkedIn Tumblr

ಮಂಗಳೂರು, ಮೇ 06 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ನಾಳೆಯಿಂದ ಟಫ್ ರೂಲ್ಸ್ ಜಾರಿಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಆದೇಶ ಹೊರಡಿಸಿದ್ದಾರೆ.

ಗುರುವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹೊಸ ಮಾರ್ಗಸೂಚಿ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ನಾಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ನಿರ್ಧಾರಿಸಲಾಗಿದೆ.

ದ.ಕ‌ ಜಿಲ್ಲೆಯಲ್ಲಿ ನಾಳೆಯಿಂದ ಬೆಳಗ್ಗೆ 6 ರಿಂದ 9 ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದೆ. 10 ಗಂಟೆ ಒಳಗೆ ವ್ಯಾಪಾರಸ್ಥರು ಹಾಗೂ ಖರೀದಿದಾರರು ಮನೆ ಸೇರಬೇಕು. ಮೆಡಿಕಲ್ ಗೆ ಹೋಗುವವರು ತಮ್ಮ ಹತ್ತಿರದ ಮೆಡಿಕಲ್ ಗಷ್ಟೆ ಹೋಗಬೇಕು‌. ವಾಹನಗಳಲ್ಲಿ ಬೇರೆ ಕಡೆ ಹೋದ್ರೆ ವಾಹನ ಸೀಜ್ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಜನರ ಅನಗತ್ಯ ಓಡಾಟಕ್ಕೆ ಪೊಲೀಸರಿಂದ ಕಠಿಣ ಕ್ರಮಕ್ಕೆ ಆದೇಶ ನೀಡಲಾಗಿದೆ. ಮೇ.15 ಬಳಿಕ ಯಾವ ಕಾರ್ಯಕ್ರಮಗಳಿಗೂ ಅವಕಾಶ ಇಲ್ಲ. ಮೇ.15 ರ ಮೇಲೆ ಅನುಮತಿ ನೀಡಿರುವ ಎಲ್ಲಾ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಲಾಗಿದ್ದು, ಮದುವೆ, ಗೃಹಪ್ರವೇಶ, ಹುಟ್ಟಿದ ಹಬ್ಬ ಸೇರಿದಂತೆ ಯಾವ ಕಾರ್ಯಕ್ರಮ ನಡೆಸುವಂತಿಲ್ಲ. ಈಗಾಗಲೇ ಕಾರ್ಯಕ್ರಮಕ್ಕೆ ಅನುಮತಿ ಪಡೆದವರಲ್ಲಿ ಕಾರ್ಯಕ್ರಮ ಮುಂದಕ್ಕೆ ಹಾಕುವಂತೆ ಮನವೊಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Comments are closed.