ಕರಾವಳಿ

ತಿಂಗಳೊಳಗೆ ವೆನ್ಲಾಕ್‌ನಲ್ಲಿ ಆಕ್ಸಿಜನ್ ಪ್ಲಾಂಟ್ – 10 ದಿನದೊಳಗೆ 50 ವೆಂಟಿಲೇಟರ್‌

Pinterest LinkedIn Tumblr

ಮಂಗಳೂರು: ಮುಂದಿನ 30-40 ದಿನದೊಳಗೆ ವೆನ್ಲಾಕ್‌ನಲ್ಲಿ ಆಕ್ಸಿಜನ್ ಪ್ಲಾಂಟ್ ಅಳವಡಿಸಲಾಗುವುದು. 10 ದಿನದೊಳಗೆ 50 ವೆಂಟಿಲೇಟರ್‌ಗಳು ಬರಲಿದೆ. ಅಲ್ಲದೆ 250 ಆಕ್ಸಿಜನೇಟೆಡ್ ಬೆಡ್ ಅಳವಡಿಸಲು ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ ಎಂದು ಶಾಸಕ ಡಿ.ವೇದವ್ಯಾಸ ಕಾಮತ್ ಹೇಳಿದ್ದಾರೆ.

ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲೂ ಆಕ್ಸಿಜನ್ ಪ್ಲಾಂಟ್ ಮಾಡುವ ಬಗ್ಗೆಯೂ ಕೆಲಸ ಕಾರ್ಯಗಳಾಗುತ್ತಿವೆ. ಉಳ್ಳಾಲದಲ್ಲಿ ಈಗಾಗಲೇ 50 ಆಕ್ಸಿಜನ್ ಬೆಡ್‌ಗಳ ವ್ಯವಸ್ಥೆ ಆಗುತ್ತಿದೆ ಎಂದವರು ತಿಳಿಸಿದ್ದಾರೆ.

ಖಾದರ್ ಅವರು ಆರೋಗ್ಯ ಸಚಿವರಾಗಿದ್ದರೂ ತಮ್ಮ ಊರಿಗೆ ಏನೂ ಕೊಡುಗೆ ನೀಡಿಲ್ಲ ಎಂದು ಹೇಳಿದ ಶಾಸಕ ಕಾಮತ್, ಕಾಂಗ್ರೆಸ್‌ಗೆ ಅಭಿವೃದ್ಧಿ ಬೇಕಿಲ್ಲ. ಅಭಿವೃದ್ಧಿಯ ವಿಷಯ ಮಾತನಾಡುವುದನ್ನು ಬಿಟ್ಟು ಟೀಕೆ ಟಿಪ್ಪಣಿ ಮಾಡುವುದರಲ್ಲಿಯೇ ಕಾಲ ಕಳೆಯುತ್ತಿದೆ ಎಂದು ಟೀಕಿಸಿದರು.

Comments are closed.