ಕರಾವಳಿ

ವೈದ್ಯರ ನಿರ್ಲಕ್ಷ್ಯ ಆರೋಪ : ವೆನ್‌ಲಾಕ್ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಯ ಸಂಬಂಧಿಕರ ಆಕ್ರೋಷ

Pinterest LinkedIn Tumblr

(ಆಸ್ಪತ್ರೆಯ ಕಡತ ಚಿತ್ರ)

ಮಂಗಳೂರು, ಮೇ.09: ನಗರದ ವೆನ್‌ಲಾಕ್ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಯ ಸಂಬಂಧಿಕರು ಗಲಾಟೆ ಮಾಡಿದ ಘಟನೆ ಭಾನುವಾರ ಸಂಜೆ ನಡೆದಿದೆ.

ವೆನ್ ಲಾಕ್ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಯೋರ್ವಳು ಸಾವನ್ನಪ್ಪಿದ್ದು, ಈಕೆಯ ಸಾವಿಗೆ ವೈದ್ಯರ ನಿರ್ಲಕ್ಷ್ಯವೆ ಕಾರಣ ಎಂದು ಸಂಬಂಧಿಕರು ಆರೋಪಿಸಿ, ಅಲ್ಲಿನ ಸಿಬ್ಬಂದಿಗಳ ಜೊತೆ ಮಾತಿನ ಚಕಮಕಿ ನಡೆಸಿದ್ದಾರೆ.

ವೆನ್ ಲಾಕ್ ಆಸ್ಪತ್ರೆಯ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಮಹಿಳೆಯೋರ್ವಳು ಭಾನುವಾರ ಸಂಜೆ ನಿಧನರಾಗಿದ್ದಾರೆ. ಇವರ ಸಾವಿಗೆ ವೈದ್ಯಕೀಯ ಸಿಬ್ಬಂದಿಯ ನಿರ್ಲಕ್ಷ್ಯ ಎಂದು ಆರೋಪಿಸಿರುವ ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ.

ಈ ವಿಚಾರ ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರ ಗಮನಕ್ಕೆ ಬಂದಿದ್ದು, ಅವರು ಕೂಡಲೇ ಪೊಲೀಸ್ ಸಿಬ್ಬಂದಿಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಿದ್ದಾರೆ.

ಇದೇ ವೇಳೆ ಸ್ಥಳಕ್ಕೆ ಆಗಮಿಸಿದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮಾತ್ ಹಾಗೂ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಲು ಯತ್ನಿಸಿದ್ದಾರೆ.

Comments are closed.