ಕರಾವಳಿ

ಎಲ್ಲಾ ವಯೋಮಾನದ ಪತ್ರಕರ್ತರಿಗೆ ಉಚಿತ ವ್ಯಾಕ್ಸಿನೇಷನ್‌ ನೀಡಲು ಸಚಿವ ಡಾ.ಸುಧಾಕರ್ ಸೂಚನೆ

Pinterest LinkedIn Tumblr

ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರನ್ನು ಫ್ರಂಟ್ ಲೈನ್ ವಾರಿಯರ್ಸ್‌ ಎಂದು ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದು, ಈ ಬಗ್ಗೆ ಕೂಡಲೇ ಕ್ರಮ ಕೈಗೊಂಡು ಎಲ್ಲಾ ವಯೋಮಾನದ ಪತ್ರಕರ್ತರಿಗೆ ಉಚಿತವಾಗಿ ವ್ಯಾಕ್ಸಿನ್ ನೀಡಬೇಕೆಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಸುಧಾಕರ್ ಅವರು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಿಎಂ ಆದೇಶ ಮಾಡಿದ್ದರೂ, ಕೆಲವು ಜಿಲ್ಲೆಯಲ್ಲಿ ಸಮಸ್ಯೆ ಮಾಡುತ್ತಿರುವ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ( KUWJ ) ಅಧ್ಯಕ್ಷ ಶಿವಾನಂದ ತಗಡೂರು ಅವರು ಸಚಿವರನ್ನು ಭೇಟಿ ಮಾಡಿ ಗಮನಕ್ಕೆ ತಂದ ಕೂಡಲೇ, ಹಿರಿಯ ಅಧಿಕಾರಿಗಳಿಗೆ ದೂರವಾಣಿ ಮೂಲಕ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮಾಧ್ಯಮಗಳಲ್ಲಿ ಕೆಲಸ ಮಾಡುವ ಎಲ್ಲರಿಗೂ ವ್ಯಾಕ್ಸಿನೇಷನ್‌ ಮಾಡಿಸುವುದು ನಮ್ಮ ಜವಾಬ್ದಾರಿ. ಆ ಕೆಲಸವನ್ನು ಮಾಡುವುದಾಗಿ ಸಚಿವರು ತಿಳಿಸಿದ್ದಾರೆ. ಆಯಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಈ ಬಗ್ಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

KUWJ ಅಭಿನಂದನೆ :

ಸಮಸ್ಯೆ ವಿವರವಾಗಿ ಆಲಿಸಿ, ಕೂಡಲೇ ಸ್ಪಂದಿಸಿ, ಪತ್ರಕರ್ತರಿಗೆ ವ್ಯಾಕ್ಸಿನೇಷನ್‌ ಗೆ ಸೂಚನೆ ನೀಡಿರುವ ಸಚಿವ ಡಾ.ಸುಧಾಕರ್ ಅವರಿಗೆ ಕೆಯುಡಬ್ಲ್ಯೂಜೆ ಅಭಿನಂದನೆ ಸಲ್ಲಿಸಿದೆ.

Comments are closed.