ಕರಾವಳಿ

ವೆನ್‍ಲಾಕ್ ಆಸ್ಪತ್ರೆಯಲ್ಲಿ ಕೋವಿಡ್ ರೋಗಿ ಸಾವು ಪ್ರಕರಣ : ತನಿಖಾ ವರದಿಗೆ ಸಚಿವ ಕೋಟ ಆದೇಶ

Pinterest LinkedIn Tumblr

ಮಂಗಳೂರು, ಮೇ 11 : ದಕ್ಷಿಣ ಕನ್ನಡ ಜಿಲ್ಲೆಯ ವೆನ್‍ಲಾಕ್‍ಆಸ್ಪತ್ರೆಯಲ್ಲಿ ಕೋವಿಡ್-19 ಸೋಂಕಿನಿಂದ ಮಹಿಳೆಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಪ್ರಕರಣದಕುರಿತು ಸಮಗ್ರ ವರದಿಯನ್ನು ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿರುತ್ತಾರೆ.

ವೆನ್ ಲಾಕ್ ಆಸ್ಪತ್ರೆಯ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಮಹಿಳೆಯೋರ್ವಳು ಭಾನುವಾರ ಸಂಜೆ ಸಾವನ್ನಪ್ಪಿದ್ದು, ಈಕೆಯ ಸಾವಿಗೆ ವೈದ್ಯರ ನಿರ್ಲಕ್ಷ್ಯವೆ ಕಾರಣ ಎಂದು ಸಂಬಂಧಿಕರು ಆರೋಪಿಸಿ, ಅಲ್ಲಿನ ಸಿಬ್ಬಂದಿಗಳ ಜೊತೆ ಮಾತಿನ ಚಕಮಕಿ ನಡೆಸಿದ್ದಾರೆ.

ಮೃತ ಮಹಿಳೆಯ ಕುಟುಂಬದವರು, ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳ ಮೇಲೆ ಕರ್ತವ್ಯ ನಿರ್ಲಕ್ಷ್ಯ ಆರೋಪ ವರಿಸಿದ್ದು, ಇವರ ಸಾವಿಗೆ ವೈದ್ಯಕೀಯ ಸಿಬ್ಬಂದಿಯ ನಿರ್ಲಕ್ಷ್ಯ ಎಂದು ಆರೋಪಿಸಿ ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ.

ಈ ಪ್ರಕರಣ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸೂಚನೆ ನೀಡಿ ಸದರಿ ಪ್ರಕರಣದಕುರಿತು ಸಮಗ್ರ ವರದಿಯನ್ನು ನೀಡುವಂತೆ ತಿಳಿಸಿರುತ್ತಾರೆ..

ವರದಿ ಬಂದ ನಂತರ ನಿರ್ಲಕ್ಷ್ಯ ವಹಿಸಿರುವುದು ಕಂಡುಬಂದಲ್ಲಿ ಅಗತ್ಯ ಕ್ರಮಗಳನ್ನು ತೆಗೆದು ಕೊಳ್ಳಲಾಗುವುದು ಎಂದು ತಿಳಿಸಿರುತ್ತಾರೆ.

Comments are closed.