ಕರಾವಳಿ

ಸಂಸದ ನಳಿನ್ ಕುಮಾರ್ ಕಟೀಲ್ ಮನವಿ ಮೇರೆಗೆ ದ.ಕ. ಜಿಲ್ಲೆಗೆ 100 ವೆಂಟಿಲೇಟರ್ ನೀಡಲು ಸಿಎಂ ಒಪ್ಪಿಗೆ

Pinterest LinkedIn Tumblr

ಮಂಗಳೂರು : ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಕೋವಿಡ್ ಸ್ಥಿತಿಗತಿಗಳ ಕುರಿತು ಚರ್ಚಿಸಿದರು.

ಇದೇ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯದ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ರವರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಅಳವಡಿಸಲು 100 ಹೆಚ್ಚುವರಿ ವೆಂಟಿಲೇಟರ್ ಗಳನ್ನು ರಾಜ್ಯ ಸರ್ಕಾರದ ವತಿಯಿಂದ ನೀಡಬೇಕೆಂದು ಮನವಿ ಮಾಡಿದ್ದಾರೆ.

ಕೂಡಲೇ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಜಿಲ್ಲೆಗೆ 100 ವೆಂಟಿಲೇಟರ್ ಗಳನ್ನ ನೀಡಲು ಒಪ್ಪಿಗೆ ಸೂಚಿಸುತ್ತಾರೆ. ಕೋವಿಡ್ 19 ಸಾಂಕ್ರಾಮಿಕ ರೋಗವನ್ನು ಎದುರಿಸುವ ನಿಟ್ಟಿನಲ್ಲಿ ಸ್ಪಂದಿಸಿದ ಮುಖ್ಯಮಂತ್ರಿಯವರಿಗೆ ನಳಿನ್ ಕುಮಾರ್ ಕಟೀಲ್ ರವರು ಕೃತಜ್ಞತೆ ಸಲ್ಲಿಸಿರುತ್ತಾರೆ.

ಕೋವಿಡ್ ವಿರುದ್ಧ ಹೋರಾಟದಲ್ಲಿ ಸರ್ಕಾರದ ಕೋವಿಡ್ ನಿಯಮಗಳು ಮತ್ತು ವ್ಯವಸ್ಥೆಗಳ ಜೊತೆಗೆ ಜನಸಾಮಾನ್ಯರ ಜವಾಬ್ದಾರಿಯೂ ಅತೀ ಮುಖ್ಯವಾಗಿ ಇರುವುದರಿಂದ, ರಾಜ್ಯದ ಜನತೆ ಸರ್ಕಾರದ ಜೊತೆಗೆ ಕೈಜೋಡಿಸಿ, ಸಹಕರಿಸುವಂತೆ ರಾಜ್ಯಾಧ್ಯಕ್ಷರು ಮತ್ತು ಮುಖ್ಯಮಂತ್ರಿಗಳು ಈ ಮೂಲಕ ಜನತೆಗೆ ಮನವಿ ಮಾಡಿದರು.

Comments are closed.