
ಮಂಗಳೂರು, ಮೇ 11 : ನಗರದ ಆಸ್ಪತ್ರೆಗಳು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ನಿರೋಧಕ ಲಸಿಕೆ ಪಡೆಯುವಾಗ ಜನಸಂದಣಿ ಸೇರುವುದನ್ನು ನಿಲ್ಲಿಸಬೇಕು ಹಾಗೂ ಎರಡನೇ ಡೋಸ್ ಪಡೆದು ಕೊಳ್ಳುವವರಿಗೆ ಮೊದಲ ಪ್ರಾಶಸ್ತ್ಯ ನೀಡಬೇಕು ಎಂದು ಆರೋಗ್ಯಾಧಿಕಾರಿಗಳಿಗೆ ಶಾಸಕ ವೇದವ್ಯಾಸ ಕಾಮತ್ ಸೂಚನೆ ನೀಡಿದರು.
ಅವರು ಮಂಗಳೂರು ಮಹಾನಗರ ಪಾಲಿಕೆಯ ಮಂಗಳ ಸಭಾಂಗಣದಲ್ಲಿ, ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕು ಹರಡುವಿಕೆಯ ನಿಯಂತ್ರಣದ ಬಗ್ಗೆ ಮಹಾನಗರ ಪಾಲಿಕೆ ಸದಸ್ಯರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದರು.
ಮಹಾನಗರ ಪಾಲಿಕೆ ವತಿಯಿಂದ ಪ್ರತಿ ವಾರ್ಡ್ಗಳಲ್ಲಿ ಕೊರೋನಾ ಸೋಂಕಿನ ಬಗ್ಗೆ ಹಾಗೂ ಲಸಿಕೆಯ ಬಗ್ಗೆ ಜನಜಾಗೃತಿ ಮೂಡಿಸುವಂತ ಕೆಲಸ ನಡೆಯಬೇಕು. ನಗರ ವ್ಯಾಪ್ತಿಯಲ್ಲಿಕೊರೋನಾ ತಡೆಗಟ್ಟುವಲ್ಲಿ ಜನಪ್ರತಿನಿಧಿಗಳು ಕೈಜೋಡಿಸಬೇಕು ಎಂದರು.
ಯಾರಲ್ಲಿ ಕೋವಿಡ್ರೋಗ ಲಕ್ಷಣಗಳು ಕಂಡು ಬರುತ್ತದೆಯೋ ಅಂತವರನ್ನು ಪತ್ತೆಹಚ್ಚಿ ಅವರುಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು ಹಾಗೂ ಅವರುಗಳನ್ನು ಅನಾವಶ್ಯಕವಾಗಿ ಮನೆಯಿಂದ ಹೊರಗೆ ಬಾರದಂತೆ ವಾರ್ಡ್ನ ಕಾರ್ಪೋರೇಟರ್ಗಳು ಹಾಗೂ ಆಶಾಕಾರ್ಯಕರ್ತೆಯರು ಎಚ್ಚರಿಕೆ ನೀಡಬೇಕು ಎಂದು ಸಲಹೆ ನೀಡಿದರು.
Comments are closed.