ಕರಾವಳಿ

ಎಸ್‌ಸಿಡಿಸಿಸಿ ಬ್ಯಾಂಕ್ ವತಿಯಿಂದ ಪೊಲೀಸ್ ಇಲಾಖೆಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ಹಸ್ತಾಂತರ :ಉಪಯುಕ್ತ ಕೊಡುಗೆ ಎಂದ ಕಮಿಷನರ್

Pinterest LinkedIn Tumblr

ಮಂಗಳೂರು, ಮೇ 12: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಎಸ್ ಸಿಡಿಸಿಸಿ ಬ್ಯಾಂಕ್ ವತಿಯಿಂದ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಇಲಾಖೆಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸುವ ಸರಳ ಕಾರ್ಯಕ್ರಮ ಸರ್ಕಾರದ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿಕೊಂಡು ಮಂಗಳವಾರ ಬ್ಯಾಂಕ್ ನ ಪ್ರಧಾನ ಕಚೇರಿಯ ಸಭಾಂಗಣದಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ.ಎನ್.ರಾಜೇಂದ್ರ ಕುಮಾರ್ ರವರ ಉಪಸ್ಥಿತಿಯಲ್ಲಿ ನೇರವೇರಿತು.

ಕಾರ್ಯಕ್ರಮದಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸರಿಗೆ 5000 ಮಾಸ್ಕ್ ಹಾಗೂ ಎಲ್ಲಾ ಪೊಲೀಸ್ ಠಾಣೆಗಳಿಗೆ ಸ್ಯಾನಿಟೈಸರ್ ಗಳನ್ನು ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಅವರು ಮಂಗಳೂರು ಪೊಲೀಸ್ ಕಮಿಷನರ್ ಎನ್ . ಶಶಿಕುಮಾರ್ ಅವರಿಗೆ ಹಸ್ತಾಂತರಿಸಿದರು.

ಈ ಸಂದರ್ಭ ಮಾತನಾಡಿದ ಪೊಲೀಸ್ ಕಮಿಷನರ್ ಅವರು, ಎಸ್ ಸಿಡಿಸಿಸಿ ಬ್ಯಾಂಕ್ ಈಗಾಗಲೇ ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿದೆ. ಸಮಾಜಮುಖಿ ಕಾರ್ಯಗಳ ಮೂಲಕ ಜನಮಾನಸದಲ್ಲಿರುವ ಎಸ್ ಸಿಡಿಸಿಸಿ ಬ್ಯಾಂಕ್ ಪೊಲೀಸ್ ಇಲಾಖೆಗೆ ಮಾಸ್ಕ್ ಹಾಗೂ ಪ್ರತೀ ಠಾಣೆಗೆ ತಲಾ ಒಂದು ಕ್ಯಾನ್ ಸ್ಯಾನಿಟೈಸರ್ ನೀಡಿದೆ.

ಈ ಸಂದರ್ಭದಲ್ಲಿ ಇದು ಪೊಲೀಸ್ ಇಲಾಖೆಗೆ ಬಹಳ ಉಪಯುಕ್ತವಾದ ಕೊಡುಗೆಯಾಗಿದೆ. ಇವರ ಈ ಕಾರ್ಯ ಇನ್ನಷ್ಟು ಹೆಚ್ಚಿನ ರೀತಿಯಲ್ಲಿ ಜನತೆಗೆ ತಲುಪುವಂತಾಗಲಿ. ಇವರ ಕೊಡುಗೆಗೆ ಬ್ಯಾಂಕಿನ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಗೆ ಈ ಸಂದರ್ಭದಲ್ಲಿ ಕೃತಜ್ಞತೆ ಸಲ್ಲಿಸುತ್ತಿದ್ದೇನೆ. ಸಮಾಜಮುಖಿ ಕೆಲಸಗಳ ಮೂಲಕ ಬ್ಯಾಂಕ್ ಮತ್ತಷ್ಟು ಕೀರ್ತಿ ಪಡೆಯಲಿ ಎಂದು ಶುಭಾ ಹಾರೈಸಿದರು.

ಅಥಿತಿಗಳನ್ನು ಸ್ವಾಗತಿಸಿದ ಬ್ಯಾಂಕ್ ನಿರ್ದೇಶಕರಾದ ಬೆಳಪು ದೇವಿ ಪ್ರಸಾದ್ ಶೆಟ್ಟಿಯವರು ಮಾತನಾಡಿ, ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಅವರು ತನ್ನ ಖಾಸಗಿ ಸಂಸ್ಥೆಯ ವತಿಯಿಂದ ಅಳಕೆಯ ಉಳ್ಳಾಲ ನರ್ಸಿಂಗ್ ಹೋಮ್ ಅನ್ನು ಖರೀದಿಸಿ ಸುಸಜ್ಜಿತ ಮತ್ತು ಸರ್ವ ವ್ಯವಸ್ಥೆಗಳೊಂದಿಗೆ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸುತ್ತಿದ್ದಾರೆ.

ಈಗಾಗಲೇ ಜಿಲ್ಲಾಡಳಿಅತಕ್ಕೆ ಉಚಿತ ಎಂಬುಲೆನ್ಸ್ ನೀಡಿದ್ದಾರೆ. ಅಪೆಕ್ಶ್ ಬ್ಯಾಂಕ್ ವತಿಯಿಂದ ಕೊರೋನಾ ನಿರ್ವಾಹಣೆಗೆ ಮುಖ್ಯಮಂತ್ರಿಗಳ ನಿಧಿಗೆ ರೂ.೫ಕೋಟಿ ನೀಡಲಾಗಿದೆ. ಕಳೆದ ಬಾರಿಯ ಕೊರೋನಾ ಸಂಕಷ್ಟ ಸಮಯದಲ್ಲಿ ಕೂಡ ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಅವರು ವಿವಿಧ ರೀತಿಯ ನೆರವು ನೀಡಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಡಿಸಿಪಿ ಹರಿರಾಮ್ ಶಂಕರ್, ಬ್ಯಾಂಕ್ ನಿರ್ದೇಶಕರಾದ ಶ್ರೀ ಶಶಿಕುಮಾರ್ ರೈ ಬಾಲ್ಯೋಟ್ಟು, ಬ್ಯಾಂಕಿನ ವಕೀಲರಾದ ಎಂ. ಪ್ರೇಮಾನಂದ ಕಿಣಿ, ಸಿಇಓ ರವೀಂದ್ರ ಬಿ. , ಲೀಡ್ ಡಿಸ್ಟ್ರಿಕ್ಟ್ ಮೆನೇಜರ್ ಪ್ರವೀಣ್ , ಬ್ಯಾಂಕಿನ ಮಹಾಪ್ರಬಂಧಕ ಗೋಪಿನಾಥ್ ಭಟ್ , ಸ್ಕ್ಯಾಡ್ಸ್ ಅಧ್ಯಕ್ಷರಾದ
ರವೀಂದ್ರ ಕಂಬಳಿ, ಉದ್ಯಮಿ ಜಯಪ್ರಕಾಶ್ ತುಂಬೆ ಮೊದಲಾದವರು ಉಪಸ್ಥಿತರಿದ್ದರು

Comments are closed.