ಕರಾವಳಿ

ಆಹಾರದ ಕಿಟ್‌ಗಳು ಹಾಗೂ ಊಟೋಪಚಾರ ಒದಗಿಸುವ ಸಂಘ-ಸಂಸ್ಥೆಗಳ ವಿವರ ನೀಡಲು ಸೂಚನೆ

Pinterest LinkedIn Tumblr

ಮಂಗಳೂರು, ಮೇ 13 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ – 19 ಸೋಂಕು ಪ್ರಸರಣದ ಸರಪಳಿಯನ್ನು ತುಂಡರಿಸುವ ಸಲುವಾಗಿ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತದ ವತಿಯಿಂದ ಕಾಲಕಾಲಕ್ಕೆ ಎಲ್ಲಾ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಜಿಲ್ಲೆಯಲ್ಲಿ ಪ್ರಸ್ತುತಕೋವಿಡ್ 19 ಪ್ರಕರಣಗಳು ದಿನದಿಂದ ದಿನಕ್ಕೆ ವೃದ್ಧಿಸುತ್ತಿದ್ದು, ಜಿಲ್ಲೆಯಲ್ಲಿನಕೋವಿಡ್ ಸೋಂಕಿತರು, ಕ್ವಾರಂಟೈನ್ ಕೇಂದ್ರಗಳಲ್ಲಿ ಆರೈಕೆ ಪಡೆಯುತ್ತಿರುವ ವ್ಯಕ್ತಿಗಳು, ವಲಸೆ ಕಾರ್ಮಿಕರು, ನಿರಾಶ್ರಿತರು ಮುಂತಾದವರಿಗೆ ಹಲವಾರು ವೈಯಕ್ತಿಕ/ಸರ್ಕಾರೇತರ ಸಂಘ ಸಂಸ್ಥೆಗಳು ಆಹಾರದ ಕಿಟ್ ಗಳು ಹಾಗೂ ಊಟೋಪಚಾರಗಳನ್ನು ಒದಗಿಸುತ್ತಿರುವುದು ಪ್ರಶಂಸನೀಯವಾಗಿರುತ್ತದೆ.

ಆದರೆ ಕೆಲವೊಂದು ಪ್ರದೇಶಗಳಲ್ಲಿ ಅಧಿಕವಾಗಿ ಆಹಾರ ವಿತರಿಸುತ್ತಿರುವುದು ಹಾಗೂ ಕೆಲವೊಂದು ಸಂಘ ಸಂಸ್ಥೆಗಳು ನಿಷ್ಕ್ರಿಯವಾಗಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು ಇಂತಹ ಸಂಘ ಸಂಸ್ಥೆಗಳು ಜಿಲ್ಲಾಡಳಿತದೊಂದಿಗೆ ಕೈಜೋಡಿಸಿ ಸುವ್ಯವಸ್ಥಿತ ರೀತಿಯಲ್ಲಿ ಅತ್ಯವಶ್ಯಕವುಳ್ಳ ಜನರಿಗೆ ಸೇವೆಯನ್ನು ತಲುಪಿಸುವ ನಿಟ್ಟಿನಲ್ಲಿ ಸಮನ್ವಯದೊಂದಿಗೆ ಕಾರ್ಯಪ್ರವೃತ್ತರಾಗುವುದು ಅತ್ಯವಶ್ಯಕವಾಗಿದ್ದು ತಮ್ಮ ಮಾಹಿತಿಗಳನ್ನು ಜಿಲ್ಲಾಡಳಿತದೊಂದಿಗೆ ಹಂಚಿಕೊಳ್ಳುವಂತೆ ಕೋರಲಾಗಿದೆ.

ಕೋವಿಡ್ -19 ತುರ್ತು ಸಂದರ್ಭದಲ್ಲಿಆಹಾರ ಪೂರೈಸಲು ಆಸಕ್ತ ವೈಯಕ್ತಿಕ/ಸರ್ಕಾರೇತರ ಸಂಘಸಂಸ್ಥೆಗಳು ತಮ್ಮ ವಿವರಗಳನ್ನು ಜಿಲ್ಲಾಧಿಕಾರಿಕಛೇರಿಗೆ ದಿನಾಂಕ 14-05-2021 ರ ಸಂಜೆ 05:00 ಗಂಟೆಯ ಒಳಗಡೆ ಈ https://forms.gle/uT21RQii5Kv2y9429 ಲಿಂಕ್ ಮೂಲಕ ಭರ್ತಿ ಮಾಡಿ ಸಲ್ಲಿಸುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9945427339 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Comments are closed.