ಕರಾವಳಿ

ಮಂಗಳೂರಿನಲ್ಲಿ ನಾಳೆಯಿಂದ ವಾರಾಂತ್ಯ ಕರ್ಫ್ಯೂ ಇರುವುದಿಲ್ಲ : ಶಾಸಕ ಕಾಮತ್

Pinterest LinkedIn Tumblr

ಮಂಗಳೂರು, ಮೇ.14 : ನಗರದಲ್ಲಿ ವಾರಾಂತ್ಯದ ಕರ್ಫ್ಯೂ ಇರುವುದಿಲ್ಲ. ಎಂದಿನಂತೆ ಬೆಳಗ್ಗೆ ಅಗತ್ಯ ಸಾಮಾಗ್ರಿಗಳ ಖರೀದಿಗೆ ಅವಕಾಶ ನೀಡಿದ್ದು, ಉಳಿದಂತೆ ಲಾಕ್ ಡೌನ್ ಜಾರಿಯಲ್ಲಿರುತ್ತದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರಾದ‌ ಕೋಟ ಶ್ರೀನಿವಾಸ್ ಪೂಜಾರಿ ಅವರಲ್ಲಿ ಶಾಸಕ ಕಾಮತ್ ಮನವಿ ಮಾಡಿಕೊಂಡ ಪ್ರಕಾರ ಮಂಗಳೂರು ನಗರದಲ್ಲಿ ವಾರಾಂತ್ಯದ ಕರ್ಫ್ಯೂ ರದ್ದುಗೊಳಿಸುವಂತೆ ಉಸ್ತುವಾರಿ ಸಚಿವರು ಆದೇಶ ಜಾರಿಗೊಳಿಸಲಿದ್ದಾರೆ ಎಂದು ಕಾಮಾತ್ ಹೇಳಿದ್ದಾರೆ.

ಕೊರೊನಾ 2ನೇ ಅಲೆ ತಡೆಯಲು ರಾಜ್ಯ ಸರ್ಕಾರ ವಾರಾಂತ್ಯ ಕರ್ಫ್ಯೂ ಹೇರಿತ್ತು. ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ನಿಯಮಾವಳಿ ಜೊತೆಗೆ ವಾರಾಂತ್ಯ ಕರ್ಫ್ಯೂ ಜಾರಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಅನಗತ್ಯ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಬೆಳಗ್ಗೆ 6ರಿಂದ 9ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಸಡಿಲಿಕೆ ಇದ್ದು, ಈ ಸಂದರ್ಭ ಜನ ಸಂಚಾರವಿದ್ದರೂ, ಆ ಬಳಿಕ ರಸ್ತೆಯಲ್ಲಿ ಜನ ಸಂಚಾರ ಕಡಿಮೆಯಾಗಿತ್ತು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್‌ಡೌನ್‌ಗೆ ಸಾರ್ವಜನಿಕರು ಉತ್ತಮ ಪ್ರತಿಕ್ರಿಯೆ ನೀಡಿದ್ದು, ಅವಶ್ಯ ವಸ್ತುಗಳ ಖರೀದಿಗೆ ನೀಡಿದ ಸಮಯ ಮುಗಿದ ಕೂಡಲೇ ಎಲ್ಲರು ಮನೆಗೆ ತೆರತಿದ್ದರಿಂದ ಮಂಗಳೂರು ಸೇರಿದಂತೆ ಇಡೀ ಜಿಲ್ಲೆ ಬಿಕೋ ಎನ್ನುತ್ತಿತ್ತು.

ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಕರ್ನಾಟಕದಾದ್ಯಂತ ಮೇ.14ರವರೆಗೆ ಲಾಕ್‌ಡೌನ್ ವಿಧಿಸಿದ್ದು, ಬೆಳ್ಳಗ್ಗೆ 6 ರಿಂದ 10ಗಂಟೆಯ ವರೆಗೆ ದಿನಸಿ ಹಾಗೂ ತರಕಾರಿಯನ್ನು ಖರೀದಿಸಲು ಮಾತ್ರ ಅವಕಾಶ ನೀಡಿತ್ತು.

ಲಾಕ್‌ಡೌನ್ ಜಾರಿಗೊಂಡಿರುವ ಹಿನ್ನೆಲೆಯಲ್ಲಿ ಇದೀಗ ವಾರಾಂತ್ಯದ ಕರ್ಫ್ಯೂ ರದ್ಧುಗೊಳಿಸಲಾಗಿದೆ. ಶನಿವಾರ ಹಾಗೂ ಭಾನುವಾರ ಕೂಡ ಎಂದಿನಂತೆ ಬೆಳಿಗ್ಗೆ 6ರಿಂದ 9ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.

Comments are closed.