ಕರಾವಳಿ

ಮುಖ್ಯಮಂತ್ರಿಗಳ ಮನವೊಲಿಸಿ ಜಿಲ್ಲೆಗೆ 100 ವೆಂಟಿಲೇಟರ್ ತರಿಸುವಲ್ಲಿ ಸಂಸದ ಕಟೀಲ್ ಯಶಸ್ವಿ: ಶಾಸಕ ಕಾಮತ್‌ರಿಂದ ಧನ್ಯವಾದ

Pinterest LinkedIn Tumblr

 

ಮಂಗಳೂರು : ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ 100 ವೆಂಟಿಲೇಟರ್ ಗಳನ್ನು ನಮ್ಮ ಜಿಲ್ಲೆಗೆ ತರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದಕ್ಕಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ,ಆರೋಗ್ಯ ಸಚಿವರಾದ ಡಾ.ಸುಧಾಕರ್, ಸಂಸದರಾದ ನಳಿನ್ ಕುಮಾರ್ ಕಟೀಲ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಶಾಸಕ ವೇದವ್ಯಾಸ್ ಕಾಮತ್ ಧನ್ಯವಾದ ಸಲ್ಲಿಸಿದ್ದಾರೆ.

ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಈಗ 70 ವೆಂಟಿಲೇಟರ್ ಗಳಿವೆ. 30 ವೆಂಟಿಲೇಟರ್ ಗಳನ್ನು ಲೇಡಿಗೋಷನ್, ಮೆಡಿಕಲ್ ಕಾಲೇಜುಗಳು ಹಾಗೂ ತಾಲೂಕು ಆಸ್ಪತ್ರೆಯಲ್ಲಿ ಅಳವಡಿಸಲಾಗಿದೆ. ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ‌ ಸಂದರ್ಭದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಹೆಚ್ಚುವರಿ 100 ವೆಂಟಿಲೇಟರ್ ಗಳಿಗೆ ಮುಖ್ಯಮಂತ್ರಿಗಳಿಗೆ ಬೇಡಿಕೆಯಿರಿಸಿದ್ದು ಮುಖ್ಯಮಂತ್ರಿಗಳು 100 ವೆಂಟಿಲೇಟರ್ ಗಳನ್ನು ನೀಡಲು ಒಪ್ಪಿಗೆ ಸೂಚಿಸಿದ್ದಾರೆ‌ ಎಂದು ಶಾಸಕ ಕಾಮತ್ ಹೇಳಿದ್ದಾರೆ.

ರಾಜ್ಯ ಸರಕಾರ ನೀಡಲು ಉದ್ಧೇಶಿಸುರುವ 100 ವೆಂಟಿಲೇಟರ್ ಗಳ ಪೈಕಿ ಪ್ರಥಮ ಹಂತದಲ್ಲಿ 40 ವೆಂಟಿಲೇಟರ್`ಗಳು ಶೀಘ್ರದಲ್ಲೇ ಜಿಲ್ಲೆಗೆ ಬರಲಿದೆ. ಸದ್ಯ ವೆನ್ಲಾಕ್ ಆಸ್ಪತ್ರೆಯಲ್ಲಿ 40 ವೆಂಟಿಲೇಟರ್ ಗಳನ್ನು ಅಳವಡಿಸಲು ಬೇಕಾದ ಸ್ಥಳಾವಕಾಶ ಮಾಡಲಾಗಿದ್ದು ಇನ್ನುಳಿದ ವೆಂಟಿಲೇಟರ್`ಗಳನ್ನು ಸಮರ್ಪಕವಾಗಿ ಜೋಡಿಸಿ ಸಾರ್ವಜನಿಕ ಸೇವೆಗೆ ನೀಡಲಾಗುವುದು. ರಾಜ್ಯ ಸರಕಾರದಿಂದ ಬರಲಿರುವ 100 ವೆಂಟಿಲೇಟರ್ ಗಳನ್ನು ಸಮರ್ಪಕವಾಗಿ ಅಳವಡಿಸಿದರೆ ಇಡೀ ರಾಜ್ಯದಲ್ಲೇ ದಕ್ಷಿಣ ಕನ್ನಡ ಜಿಲ್ಲೆ ಅತೀ ಹೆಚ್ಚಿನ ಸಂಖ್ಯೆಯ ವೆಂಟಿಲೇಟರ್ ಹೊಂದಿರುವ ಜಿಲ್ಲೆಯಾಗಲಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.

Comments are closed.