
ಮಂಗಳೂರು : ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ.ಆರ್.ಪಿ.ಎಲ್ ಸಂಸ್ಥೆಯ ಸಿ.ಎಸ್.ಆರ್ ನಿಧಿಯಿಂದ 1.25 ಕೋಟಿ ವೆಚ್ಚದ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಕಾಮಗಾರಿ ಪ್ರಾರಂಭವಾಗಿದೆ ಎಂದು ಶಾಸಕ ವೇದವ್ಯಾಸ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಅವರ ಕೋರಿಕೆಯ ಮೇರೆಗೆ ಎಂ.ಆರ್.ಪಿ.ಎಲ್ ಸಂಸ್ಥೆಯು ವೆನ್ಲಾಕ್ ಆಸ್ಪತ್ರೆಯಲ್ಲಿ ಆಕ್ಸಿಜನ್ ನಿರ್ಮಾಣಕ್ಕೆ 1.25 ಕೋಟಿ ಅನುದಾನ ಬಿಡುಗಡೆಗೊಳಿಸಿದೆ. ಈ ಯೋಜನೆಯ ಕಾರ್ಯ ಪ್ರಾರಂಭವಾಗಲಿದ್ದು ಶೀಘ್ರದಲ್ಲೇ ಸಾರ್ವಜನಿಕ ಸೇವೆಗೆ ಲಭ್ಯವಾಗಲಿದೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಅಲ್ಲದೆ ಸದ್ಯ ವೆನ್ಲಾಕ್ ಆಸ್ಪತ್ರೆಯಲ್ಲಿ 6 ಸಾವಿರ ಲೀ.ಆಕ್ಸಿಜನ್ ಶೇಖರಣಾ ಟ್ಯಾಂಕ್ ಇದ್ದು ಹೆಚ್ಚುವರಿ ಮತ್ತೊಂದು 6 ಸಾವಿರ ಲಿ. ಶೇಖರಣಾ ಸಾಮರ್ಥ್ಯದ ಟ್ಯಾಂಕ್ ನಿರ್ಮಿಸುವ ಕಾರ್ಯ ಪ್ರಗತಿಯಲ್ಲಿದೆ. ವೆನ್ಲಾಕ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ವೈದ್ಯಕೀಯ ಸೌಲಭ್ಯಗಳ ಕೊರತೆ ಉಂಟಾಗದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
Comments are closed.