ಕರಾವಳಿ

7 ತಿಂಗಳ ಗರ್ಭಿಣಿ 24 ವರ್ಷದ ಕಿರಿಯ ಪಿಎಸ್ಐ ಶಾಮಿಲಿ ಅವರು ಕೋವಿಡ್‌ಗೆ ಬಲಿ

Pinterest LinkedIn Tumblr

ಮಂಗಳೂರು, ಮೇ 18: ಮಂಗಳೂರಿನಲ್ಲಿ ಪ್ರೊಬೆಷನರಿ ಪಿಎಸ್ ಐ ಆಗಿ ಕರ್ತವ್ಯ ನಿಭಾಯಿಸುತ್ತಿದ್ದ 24 ವರ್ಷದ ಶಾಮಿಲಿ ಕೋವಿಡ್ ಗೆ ಬಲಿಯಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಎಸ್ ಪಿ ಕಚೇರಿಯಲ್ಲಿ ಪ್ರೊಬೆಷನರಿ ಪಿಎಸ್ ಐ ಆಗಿ ಕಾರ್ಯನಿರ್ವಾಹಿಸುತ್ತಿದ್ದ ಮೂಲತಃ ಕೋಲಾರದವರಾದ ಶಾಮಿಲಿ ಅವರು ಇಂದು ( ಮಂಗಳವಾರ) ಮುಂಜಾನೆ 4:30 ರ ಹೊತ್ತಿಗೆ ನಿಧನರಾಗಿದ್ದಾರೆ ಎಂದು ಕರ್ನಾಟಕದ ಡಿಜಿಪಿ ಪ್ರವೀಣ್ ಸೂದ್ ಅವರು, ತಮ್ಮ ಟ್ವೀಟರ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ.

ಜನವರಿ 11 ರಂದು ಮಂಗಳೂರು ಎಸ್ ಪಿ ಕಚೇರಿಯಲ್ಲಿ ಸೇವೆ ಆರಂಭಿಸಿದ್ದರು. 7 ತಿಂಗಳ ಗರ್ಭಿಣಿಯಾಗಿದ್ದ ಅವರು, ರಜೆ ತೆಗೆದುಕೊಂಡು ತಮ್ಮ ಊರು ಕೋಲಾರಕ್ಕೆ ಮರಳಿದ್ದರು. ಅಲ್ಲಿ ಅವರಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು, ಮೇ 2 ರಂದು ಕೋವಿಡ್ ಚಿಕಿತ್ಸೆಗಾಗಿ ಜಾಲಪ್ಪ ಆಸ್ಪತ್ರೆಗೆ ದಾಖಲಾಗಿದ್ದರು. ಗರ್ಭಿಣಿಯಾಗಿದ್ದ ಕಾರಣ ಅವರು ಕೋವಿಡ್ ಲಸಿಕೆ ಪಡೆದುಕೊಂಡಿರಲಿಲ್ಲ ಎನ್ನಲಾಗಿದೆ.

ಪೊಲೀಸ್ ಕುಟುಂಬದಲ್ಲಿ ಕಿರಿಯ ಸದಸ್ಯರಾಗಿರುವ ಶಾಮಿಲಿ ಕೋವಿಡ್ ಗೆ ಬಲಿಯಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಎಲ್ಲರೂ ಕೋವಿಡ್ ನಿಯಮ ಪಾಲಿಸಿ ಪೊಲೀಸರೊಂದಿಗೆ ಸಹಕರಿಸಿ, ಸುರಕ್ಷಿತವಾಗಿರಿ ಎಂದು ಡಿಜಿಪಿ ಅವರು ಈ ವೇಳೆ ಮನವಿ ಮಾಡಿದ್ದಾರೆ.

Comments are closed.