
ಮಂಗಳೂರು : ಕಸಬಾ ಬೆಂಗರೆಯಲ್ಲಿರುವ ನಗರ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿರುವ ಎಂ ಪಿ ಡಬ್ಲ್ಯೂ, ಆಶಾ ಕಾರ್ಯಕರ್ತೆಯರಿಗೆ ಹಾಗೂ ಅಲ್ಲಿರುವ ಸಿಬ್ಬಂದಿಯವರಿಗೆ ಜಿಲ್ಲಾ ಕಾಂಗ್ರೆಸ್ ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಜೆ. ಆರ್. ಲೋಬೊ ರವರು ದಿನಸಿ ಸಾಮಗ್ರಿಗಳ ಕಿಟ್ ಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಲೋಬೊ ರವರು ಮಾತನಾಡುತ್ತ, ಕೋವಿಡ್ ಅಲೆಯ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯವರು ಬಹಳಷ್ಟು ಶ್ರಮಿಸುತ್ತಿದ್ದಾರೆ. ಪ್ರತಿಯೊಂದು ಕೋವಿಡ್ ಸೋಂಕಿತರ ಮನೆಗಳಿಗೆ ತೆರಳಿ ಅವರ ಅರೋಗ್ಯ ವಿಚಾರಿಸಿ, ಅವರಿಗೆ ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದಾರೆ. ಅವರು ಮಾಡುತ್ತಿರುವ ಸೇವೆ ನಿಜಕ್ಕೂ ಶ್ಲಾಘನೀಯ. ತಮ್ಮ ಅರೋಗ್ಯವನ್ನು ಲೆಕ್ಕಿಸದೆ ಅವರು ಮಾಡುತ್ತಿರುವ ಕಾರ್ಯ ಎಲ್ಲರಿಗೂ ಮಾದರಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರುಗಳಾದ ಟಿ. ಹೊನ್ನಯ್ಯ, ದುರ್ಗಾ ಪ್ರಸಾದ್, ಟಿ. ಕೆ. ಸುಧೀರ್, ನೀರಜ್ ಪಾಲ್, ಆಸೀಫ್ ಆಹ್ಮದ್, ರಮಾನಂದ ಪೂಜಾರಿ, ಆಸೀಫ್ ಜೆಪ್ಪು, ಉದಯ್ ಕುಂದರ್, ಯಶ ವಂತ ಪ್ರಭು, ಯೋಗೇಶ್ ನಾಯಕ್, ಲಕ್ಷ್ಮಣ್ ಶೆಟ್ಟಿ, ಶಾನ್ ಡಿಸೋಜಾ ಮೊದಲಾದವರು ಉಪಸ್ಥಿತರಿದ್ದರು.
Comments are closed.