
ಮಂಗಳೂರು : ಕೆ.ಎಸ್.ಆರ್.ಟಿ.ಸಿ ನೌಕರರಿಗೆ ಬಿಜೈ ಕೆ.ಎಸ್.ಆರ್.ಟಿ.ಸಿ ನಿಲ್ದಾಣದಲ್ಲಿ ಲಸಿಕೆ ನೀಡಲಾಗಿದ್ದು ಶಾಸಕ ವೇದವ್ಯಾಸ್ ಕಾಮತ್ ಅವರು ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು.
ಆ ಬಳಿಕ ಮಾತನಾಡಿದ ಶಾಸಕ ಕಾಮತ್, ಜಿಲ್ಲೆಯ ಪ್ರತಿಯೊಬ್ಬರಿಗೂ ಲಸಿಕೆ ನೀಡುವ ಜವಬ್ದಾರಿ ನಮ್ಮ ಮೇಲಿದೆ. ಎಲ್ಲರಿಗೂ ಕೂಡ ಲಸಿಕೆ ನೀಡಲಾಗುತ್ತದೆ. ವದಂತಿಗಳಿಗೆ ಕಿವಿಗೊಡದಿರಿ ಎಂದು ಹೇಳಿದ್ದಾರೆ.

ಕೆ.ಎಸ್.ಆರ್.ಟಿ.ಸಿ ನೌಕರರಿಗೆ ಇಲ್ಲಿ ಲಸಿಕೆ ನೀಡಲಾಗುತ್ತಿದೆ. ಕೋವಿಡ್ ಸೋಂಕಿನಿಂದ ಪಾರಾಗಲು ಲಸಿಕೆ ಹಾಕಿಸಿಕೊಳ್ಳುವುದು ಅನಿವಾರ್ಯವಾಗಿದೆ. ಸಾರ್ವಜನಿಕರು ಯಾವುದೇ ರೀತಿಯಲ್ಲಿ ಗೊಂದಲಕ್ಕೀಡಾಗದೆ ಲಸಿಕೆ ಪಡೆಯಬೇಕು ಎಂದು ಶಾಸಕ ಕಾಮತ್ ಹೇಳಿದ್ದಾರೆ.
Comments are closed.